

ಭೋಪಾಲ್: ದೇಶದ ಬಹುತೇಕ ರಾಜ್ಯಗಳಲ್ಲಿ ಕರೊನಾ ಸೋಂಕಿನ ತೀವ್ರತೆ ಹೆಚ್ಚಾಗಲಾರಂಭಿಸಿದ್ದು, ರಾಜ್ಯಗಳು ಲಾಕ್ಡೌನ್ ಮೊರೆ ಹೋಗಲಾರಂಭಿಸಿವೆ. ಇದೀಗ ಮಧ್ಯಪ್ರದೇಶ ಸರ್ಕಾರವೂ ಲಾಕ್ಡೌನ್ ಘೋಷಣೆ ಮಾಡಿದೆ.
ಮೇ 15ರವರೆಗೆ ರಾಜ್ಯದಲ್ಲಿ ಲಾಕ್ಡೌನ್ ಜಾರಿಯಲ್ಲಿರಲಿದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ. ಅಲ್ಲಿಯವರೆಗೆ ಅಗತ್ಯ ವಸ್ತು ಹೊರೆತುಪಡಿಸಿ ಬೇರೆಲ್ಲ ಅಂಗಡಿಗಳು ಬಾಗಿಲು ಮುಚ್ಚಿರಲಿವೆ. ದಯಮಾಡಿ ರಾಜ್ಯದ ಜನರು ಮನೆಯಿಂದ ಹೊರಬರಬಾರದು ಎಂದು ಅವರು ಮನವಿ ಮಾಡಿದ್ದಾರೆ.
ಲಾಕ್ಡೌನ್ ಮಾಡಲೇ ಬೇಕಾದ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ. ಪಾಸಿಟಿವಿಟಿ ಪ್ರಮಾಣ ಅತಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಲಾಕ್ಡೌನ್ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮದುವೆಗಳು ಸೂಪರ್ ಸ್ಪ್ರೆಡರ್ ಆಗುತ್ತಿವೆ. ಹಾಗಾಗಿ ಮದುವೆ ಕಾರ್ಯಕ್ರಮಗಳನ್ನು ಆದಷ್ಟು ಮುಂದೂಡಿ ಎಂದು ಸಿಎಂ ಜನರಲ್ಲಿ ವಿನಂತಿಸಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಮೇ 5ರಂದು 89 ಸಾವಿರ ದಾಟಿದ್ದು, ಇನ್ನು ಕೆಲ ದಿನಗಳಲ್ಲಿ 1 ಲಕ್ಷ ದಾಟುವ ಸಾಧ್ಯತೆಯಿದೆ. (ಏಜೆನ್ಸೀಸ್)