

ಹಾವೇರಿ: ಜಿಲ್ಲೆಯ ನ್ಯಾಯಾಲಯಗಳಲ್ಲಿ ಶನಿವಾರ ಹಮ್ಮಿಕೊಂಡ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣ ಸೇರಿ ಇತ್ಯರ್ಥಕ್ಕೆ ಗುರುತಿಸಲ್ಪಟ್ಟ 57,149 ಪ್ರಕರಣಗಳಲ್ಲಿ 46,752 ಪ್ರಕರಣ ಇತ್ಯರ್ಥಗೊಂಡಿದ್ದು, 31,44,94,619 ರೂ. ಮೊತ್ತದ ರಾಜೀಯಾಗಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾ-ದೀಶ ಕೆ.ಸಿ. ಸದಾನಂದಸ್ವಾಮಿ ತಿಳಿಸಿದರು.
ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಬಾಕಿ ಇರುವ ಇತ್ಯರ್ಥಕ್ಕೆ ಗುರುತಿಸಲಾದ 6588 ಪ್ರಕರಣಗಳ ಪೈಕಿ 4,555 ಪ್ರಕರಣಗಳು ಇತ್ಯರ್ಥಗೊಂಡಿದ್ದು, 20,12,21,501 ರೂ. ರಾಜೀಯಾಗಿದೆ. ವ್ಯಾಜ್ಯ ಪೂರ್ವ ಪ್ರಕರಣಗಳಲ್ಲಿ ಇತ್ಯರ್ಥಕ್ಕೆ ಗುರುತಿಸಲಾದ 50,561 ಪ್ರಕರಣಗಳಲ್ಲಿ 42,197 ಪ್ರಕರಣಗಳು ಇತ್ಯರ್ಥಗೊಂಡಿದ್ದು, 11,32,73,118 ರೂ. ಮೊತ್ತದ ರಾಜೀಯಾಗಿದೆ ಎಂದರು.
ಜಿಲ್ಲೆಯ ವಿವಿಧ ನ್ಯಾಯಾಲಯಗಳ ಆರು ಕೌಟುಂಬಿಕ ಪ್ರಕರಣಗಳಲ್ಲಿ ದಂಪತಿ ರಾಜೀಮಾಡಿಕೊಂಡು ಮತ್ತೆ ಒಂದಾಗಿದ್ದಾರೆ. ಹಾವೇರಿ ಮತ್ತು ಶಿಗ್ಗಾಂವಿ ನ್ಯಾಯಾಲಯದಲ್ಲಿ ತಲಾ ಎರಡು, ಬ್ಯಾಡಗಿ ಮತ್ತು ಹಾನಗಲ್ಲ ನ್ಯಾಯಾಲಯದಲ್ಲಿ ತಲಾ ಒಂದು ಕೌಟುಂಬಿಕ ಪ್ರಕರಣಗಳಲ್ಲಿ ದಂಪತಿ ರಾಜಿಮಾಡಿಕೊಂಡು ಒಂದಾಗಿದ್ದಾರೆ.
ಜಿಲ್ಲಾ ವಕೀಲರ ಸಂ, ಎಲ್ಲ ತಾಲೂಕು ವಕೀಲರ ಸಂ, ಹಾವೇರಿ ಜಿಲ್ಲೆಯ ಎಲ್ಲ ನ್ಯಾಯಾ-ಧೀಶರು, ಅಭಿಯೋಜನೆ ಇಲಾಖೆ, ಆರಕ ಇಲಾಖೆಯವರು, ಇತರೆ ಇಲಾಖೆಯವರು ಹಾಗೂ ಕಗಾರರ ಸಹಕಾರದೊಂದಿಗೆ ರಾಷ್ಟ್ರೀಯ ಲೋಕ ಅದಾಲತ್ ಯಶಸ್ವಿಯಾಗಿ ಜರುಗಿದೆ ಎಂದು ಅವರು ತಿಳಿಸಿದ್ದಾರೆ.