

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು 23 ಬಿಜೆಪಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಚುನಾವಣಾ ಉಸ್ತುವಾರಿಗಳು ಮತ್ತು ಸಹ-ಉಸ್ತುವಾರಿಗಳನ್ನು ನೇಮಿಸಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಮುಂದಿನ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸಂಸದ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರನ್ನು ಕರ್ನಾಟಕದ ಉಸ್ತುವಾರಿಯನ್ನಾಗಿ ಮತ್ತು ಸುಧಾಕರ್ ರೆಡ್ಡಿ ಅವರನ್ನು ಕರ್ನಾಟಕದ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಿ ಬಿಜೆಪಿ ಹೈಕಮಾಂಡ್ ಶನಿವಾರ ಆದೇಶ ಹೊರಡಿಸಿದೆ.
ಮಹಾರಾಷ್ಟ್ರದ ಬಿಜೆಪಿ ಮುಖಂಡ ವಿನೋದ್ ತಾವ್ಡೆ ಅವರನ್ನು ಬಿಹಾರದ ಉಸ್ತುವಾರಿಯಾಗಿ ಆಯ್ಕೆ ಮಾಡಲಾಗಿದೆ. ಬೈಜಯಂತ್ ಪಾಂಡಾ ಅವರನ್ನು ಉತ್ತರ ಪ್ರದೇಶದ ನೂತನ ಉಸ್ತುವಾರಿಯಾಗಿ ನೇಮಿಸಲಾಗಿದೆ.
ವಿಜಯಪಾಲ್ ತೋಮರ್ ಅವರನ್ನು ಒಡಿಶಾ ಹಾಗೂ ಶ್ರೀಕಾಂತ್ ಶರ್ಮಾ ಅವರನ್ನು ಹಿಮಾಚಲದ ಉಸ್ತುವಾರಿಯನ್ನಾಗಿ ಮಾಡಲಾಗಿದೆ. ಒಟ್ಟು 23 ಮಂದಿಯನ್ನು ಉಸ್ತುವಾರಿ ಮತ್ತು ಸಹ ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಕೇಂದ್ರದ ಮಾಜಿ ಸಚಿವ ಪ್ರಕಾಶ್ ಜಾವಡೇಕರ್ ಅವರನ್ನು ದಕ್ಷಿಣ ರಾಜ್ಯ ಕೇರಳದ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ.