ರೈತರ ಪ್ರಗತಿಗೆ ಕೇಂದ್ರ ಪೂರಕ ಆಡಳಿತ

mp ragavendra
ಸೊರಬ ತಾಲೂಕಿನ ನಿಸರಾಣಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಭಾರತ ವಿಕಸಿತ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿದರು. ರಾಜು ತಲ್ಲೂರು, ಸರೋಜಮ್ಮ, ಸುಮಂಗಲಾ, ಅಮರನಾಥ್ ಇತರರಿದ್ದರು.
Published on

ಸೊರಬ: ಕೇಂದ್ರ ಸರ್ಕಾರ ಬಡವರು, ರೈತರನ್ನು ಗಮನದಲ್ಲಿಟ್ಟುಕೊಂಡು ಅವರ ಪ್ರಗತಿಗೆ ಪೂರಕವಾಗಿ ಆಡಳಿತ ನಡೆಸುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ತಾಲೂಕಿನ ನಿಸರಾಣಿ ಗ್ರಾಪಂ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿಕಸಿತ ಭಾರತ ಸಂಕಲ್ಪ ಕಾರ್ಯಕ್ರಮ ಯೋಜನೆ ಅಡಿಯಲ್ಲಿ ಲಾನುಭವಿಗಳಿಗೆ ಗ್ಯಾಸ್ ಕಿಟ್ ವಿತರಿಸಿ ಅವರು ಮಾತನಾಡಿ, ಬಿಜೆಪಿ ಭ್ರಷ್ಟಾಚಾರ ಮುಕ್ತ ಆಡಳಿತ ನಡೆಸುತ್ತಿದೆ ಎಂದರು.
ಕಾಂಗ್ರೆಸ್ ಅಧಿಕಾರಕ್ಕಾಗಿ ಗ್ಯಾರಂಟಿ ಯೋಜನೆ ಘೋಷಿಸಿ ಕೆಲವರಿಗೆ ಮಾತ್ರ ಯೋಜನೆಯ ಲಾಭ ನೀಡುತ್ತಿದೆ. ಆದರೆ ಕೇಂದ್ರ ಸರ್ಕಾರ ನೇರವಾಗಿ ಜನರಿಗೆ ಪ್ರತಿಲ ದೊರೆಯುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ತಿಳಿಸಿದರು.
ಜಲಜೀವನ್ ಮಿಷನ್ ಯೋಜನೆಯಡಿ ಶುದ್ಧ ನೀರನ್ನು ದೇಶದಾದ್ಯಂತ ಕಲ್ಪಿಸಲಾಗಿದೆ. ಶರಾವತಿ ಹಿನ್ನೀರನ್ನು ಆನವಟ್ಟಿ, ಶಿರಾಳಕೊಪ್ಪ ಪಟ್ಟಣಕ್ಕೆ ಒದಗಿಸುವ ನಿಟ್ಟಿನಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ನೀಲನಕ್ಷೆ ಸಿದ್ಧ ಪಡಿಸಲಾಗಿತ್ತು. ಯೋಜನೆ ಅನುಷ್ಠಾನಕ್ಕೆ ತರಲು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.
ಜನಧನ್ ಖಾತೆ ತೆರೆದು ಸಾಮಾನ್ಯ ಜನರಿಗೆ ಯೋಜನೆ ಅನುದಾನ ತಲುಪಿಸುವಲ್ಲಿ ಯಶಸ್ವಿಯಾಗಿದೆ. ತಾಲೂಕಿನಲ್ಲಿ ರಸ್ತೆ ಹದಗೆಟ್ಟಿದ್ದು ಡಾಂಬರೀಕರಣಕ್ಕೆ ಆದ್ಯತೆ ನೀಡಲಾಗುವುದು ಎಂದರು.
ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಮಾತನಾಡಿ, ಕಳೆದ ಒಂದು ದಶಕದಲ್ಲಿ ದೇಶದಲ್ಲಿ ಮೂಲಸೌಕರ್ಯಗಳ ಸ್ಥಿತಿ ಸುಧಾರಣೆ ಕಂಡಿದೆ. ರೈಲ್ವೆ ಹಳಿ ಹಾಗೂ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲಾಗಿದೆ. ಜಿ ಶೃಂಗಸಭೆ ಮೂಲಕ ಭಾರತ ಜಾಗತಿಕ ಮಟ್ಟದಲ್ಲಿ ಮೊದಲ ಸ್ಥಾನದಲ್ಲಿ ಗುರುತಿಸಿಕೊಂಡಿರುವುದು ಹೆಮ್ಮೆಯ ಸಂಗತಿ ಎಂದರು.
ಗ್ರಾಪಂ ಅಧ್ಯಕ್ಷೆ ಸರೋಜಮ್ಮ, ಉಪಾಧ್ಯಕ್ಷೆ ಸುಮಂಗಲಾ, ಮಾಚಿದೇವ ನಿಗಮದ ಮಾಜಿ ರಾಜ್ಯಾಧ್ಯಕ್ಷ ರಾಜು ತಲ್ಲೂರು, ಅಮರನಾಥ್, ಸುನಿಲ್, ಸೀಮಾ, ಮುಖಂಡರಾದ ಎಚ್.ಈ. ಜ್ಞಾನೇಶ್, ಶಿವಕುಮಾರ್ ಕಡಸೂರು, ಗುರುಮೂರ್ತಿ ಹಿರೇಶಕುನ, ಪರಶುರಾಮಪ್ಪ ಹಾಲಗಳಲೆ, ಕೀರ್ತಿರಾಜ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net