

ಗಾಂಧಿನಗರ: ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕ ಅಮಿತ್ ಷಾ ಅವರು ಮುಂಬರುವ ಲೋಕಸಭೆ ಚುನಾವಣೆಗೆ ಶುಕ್ರವಾರ ಗಾಂಧಿನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಉಮೇದುವಾರಿಕೆ ಸಲ್ಲಿಸಿದ್ದಾರೆ.
ಅಮಿತ್ ಷಾ ಅವರು ಗುಜರಾತ್ನ ಗಾಂಧಿನಗರ ಲೋಕಸಭೆ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಕಾಂಗ್ರೆಸ್ ತನ್ನ ಪಕ್ಷದ ಕಾರ್ಯದರ್ಶಿ ಸೋನಾಲ್ ಪಟೇಲ್ ಅವರನ್ನು ಗಾಂಧೀನಗರದಿಂದ ಅಖಾಡಕ್ಕಿಳಿಸಿದೆ.
ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಅಮಿತ್ ಷಾ ಅವರು, ಈ ಹಿಂದೆ ಎಲ್‌ಕೆ ಅಡ್ವಾಣಿ ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರು ಪ್ರತಿನಿಧಿಸಿದ್ದ ಮತ್ತು ಪ್ರಧಾನಿ ನರೇಂದ್ರ ಮೋದಿ ಮತದಾರರಾಗಿರುವ ಗಾಂಧಿನಗರ ಕ್ಷೇತ್ರದಿಮದ ಸ್ಪರ್ಧಿಸುತ್ತಿರುವುದು ನನಗೆ ಹೆಮ್ಮೆ ತಂದಿದೆ ಎಂದಿದ್ದಾರೆ.
2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನಾಯಕ ಅಮಿತ್ ಶಾ ಅವರು 5,57,014 ಮತಗಳ ಅಂತರದಿಂದ ಮೊದಲ ಬಾರಿಗೆ ಸ್ಥಾನವನ್ನು ಗೆದ್ದಿದ್ದರು. ಅವರು 3,37,610 ಮತಗಳನ್ನು (26.26%) ಪಡೆದ ಕಾಂಗ್ರೆಸ್ ಅಭ್ಯರ್ಥಿ ಡಾ ಸಿಜೆ ಚಾವ್ಡಾ ಅವರನ್ನು ಸೋಲಿಸಿದ್ದರು.ಗುಜರಾತ್‌ನಲ್ಲಿ ಮೇ 7 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.
ಗುಜರಾತ್‌ನಲ್ಲಿ ಮೇ 7 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ. ಅಮಿತ್ ಷಾ ಅವರು ನಾಮಪತ್ರ ಸಲ್ಲಿಕೆ ವೇಳೆ ಅವರೊಂದಿಗೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಗೃಹ ಖಾತೆ ರಾಜ್ಯ ಸಚಿವ ಹರ್ಷ ಸಾಂಘವಿ ಜೊತೆಗಿದ್ದರು.