

ಬೆಂಗಳೂರು: ಮುಡಾ ಹಗರಣದ ತನಿಖೆ ನಡೆಸುತ್ತಿದ್ದ ಲೋಕಾಯುಕ್ತ (Lokayuktha) ಇದೀಗ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ರವಾನಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ. ಇದೇ ನವೆಂಬರ್ 06ರಂದು ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ.
ರಾಜ್ಯಾದ್ಯಂತೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದ ಮುಡಾ ಹಗರಣದಲ್ಲಿ ಸಿಎಂ ವಿರುದ್ಧ ಗಂಭೀರ ಆರೋಪ ಕೇಳಿಬಂದಿತ್ತು. ಇದೀಗ ಈ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿರುವ ಲೋಕಾಯುಕ್ತ ಸಿದ್ದರಾಮಯ್ಯ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.
ಇನ್ನು ತಮ್ಮ 40 ವರ್ಷಗಳ ಸುದೀರ್ಘ ರಾಜಕೀಯ ಪಯಣದಲ್ಲಿ ಇದೇ ಮೊದಲ ಬಾರಿಗೆ ವಿಚಾರಣೆ ಎದುರಿಸಲಿರುವ ಸಿಎಂ ಸಿದ್ದರಾಮಯ್ಯ, ಲೋಕಾಯುಕ್ತ ನೋಟಿಸ್ ಬೆನ್ನಲ್ಲೇ ನಾನು ವಿಚಾರಣೆಗೆ ಆಗಮಿಸುತ್ತೇನೆ ಎಂದು ಪ್ರತಿಕ್ರಿಯಿಸಿದ್ದಾರೆ.