

ಬೆಂಗಳೂರು: ಕಾಂಗ್ರೆಸ್ನಲ್ಲಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ದಿಢೀರ್ ಕೈ ತೊರೆದು ಮರಳಿ ಕಮಲ ಸೇರಿದ ವಿಷಯ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಯನ್ನು ಹುಟ್ಟುಹಾಕಿತು. ಇದೆಲ್ಲದರ ನಡುವೆ ಇಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ಶೆಟ್ಟರ್ಗೆ ಟಿಕೆಟ್ ಸಿಗುವ ವಿಚಾರಕ್ಕೆ ಸಂಬಂಧಿಸಿದಂತೆ ಕೆಲವು ವಿಚಾರಗಳನ್ನು ಬಹಿರಂಗಪಡಿಸಿದ್ದಾರೆ.
ಈ ಕುರಿತು ಮಾತನಾಡಿದ ಮಾಜಿ ಸಚಿವರು, "ಗೃಹ ಸಚಿವ ಅಮಿತ್ ಶಾ ಮತ್ತು ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ, ಭೂಪೇಂದ್ರ, ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರ ಸಾರಥ್ಯದಲ್ಲಿ ಜಗದೀಶ್ ಶೆಟ್ಟರ್ ಅವರನ್ನು ಭಾರತೀಯ ಜನತಾ ಪಾರ್ಟಿಗೆ ಸೇರಿದರು. ಅವರು ಯಾವುದೋ ಕಾರಣಕ್ಕೆ ಹೋಗಿದ್ದರು. ಈ ದೇಶದಲ್ಲಿ ಮತ್ತೊಮ್ಮೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರನ್ನು ನೋಡಬೇಕು ಎಂಬುದು ಅವರ ಆಸೆ" ಎಂದರು.
"ಈ ಕಾರಣಕ್ಕೆ ಅವರು ಮರಳಿ ಬಿಜೆಪಿಗೆ ಸೇರಿದ್ದಾರೆ. ರಾಜ್ಯದಲ್ಲಿ ಪ್ರವಾಸ ಮಾಡಿ, ಸಂಘಟನೆ ಮಾಡಿ 28 ಲೋಕಸಭೆ ಕೂಡ ಗೆಲ್ಲಿಸಬೇಕು ಎಂಬ ಲೆಕ್ಕಾಚಾರದಲ್ಲಿ ಬಂದಿದ್ದಾರೆ. ಟಿಕೆಟ್ ವಿಚಾರ......." ಹೆಚ್ಚಿನ ಮಾಹಿತಿ ತಿಳಿಯಲು ಕೆಳಗಿನ ವಿಡಿಯೋ ವೀಕ್ಷಿಸಿ.