

ರಾಣೆಬೆನ್ನೂರ: ಬೆಂಗಳೂರಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟದ ಉದ್ದ ಜಿಗಿತ ಸ್ಪರ್ಧೆಯಲ್ಲಿ ತಾಲೂಕಿನ ಮೇಡ್ಲೇರಿ ಗ್ರಾಮದ ಮಾದರಿ ಕೇಂದ್ರ ಕನ್ನಡ ಹೆಣ್ಣು ಮಕ್ಕಳ ಶಾಲೆಯ ಶಿಕ್ಷಕಿ ಪದ್ಮಾವತಿ ಪಾಟೀಲ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರು ಚಂಡಿಗಡ್ನಲ್ಲಿ ೆ. 19ರಿಂದ 21 ರವರೆಗೆ ನಡೆಯುತ್ತಿರುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.