ಪಾಕಿಸ್ತಾನದಲ್ಲಿ ತೀವ್ರ ಇಂಧನ ಕೊರತೆ

nation 2
Published on

ಇಸ್ಲಾಮಾಬಾದ್: ಪಾಕಿಸ್ತಾನದ ಹಲವು ಪ್ರಮುಖ ನಗರಗಳಲ್ಲಿ ಇಂಧನ ಕೊರತೆ ಕಾಡಲಾರಂಭಿಸಿದ್ದು, ಪೆಟ್ರೋಲ್ ಪಂಪ್​ಗಳ ಮುಂದೆ ವಾಹನಗಳ ಉದ್ದನೆಯ ಸಾಲು ಸಾಮಾನ್ಯ ದೃಶ್ಯವಾಗಿದೆ. ಕೊರತೆಯ ಹಿನ್ನೆಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮೂರರಿಂದ ನಾಲ್ಕು ಪಟ್ಟು ಏರಿಕೆಯಾಗಿದೆ. ತೈಲ ಕಂಪನಿಗಳು ಕೃತಕ ಅಭಾವ ಸೃಷ್ಟಿಸುತ್ತಿವೆ ಎಂದು ಪಾಕಿಸ್ತಾನ ಸರ್ಕಾರ ಆರೋಪಿಸಿದೆ. ಬಲೂಚಿಸ್ತಾನದ ಕ್ವೆಟ್ಟಾದಲ್ಲಿ ವಾಹನಗಳು ಇಂಧನ ತುಂಬಿಸಿಕೊಳ್ಳಲು ಉದ್ದನೆಯ ಸಾಲಿನಲ್ಲಿ ನಿಂತಿವೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಕರಾಚಿಯಲ್ಲಿ ಕೂಡ ಪರಿಸ್ಥಿತಿ ಇದಕ್ಕಿಂತ ಭಿನ್ನವಿಲ್ಲ.

ಸರ್ಕಾರದ ಎಚ್ಚರಿಕೆ: ಕೃತಕ ಅಭಾವ ಸೃಷ್ಟಿಸಿ ಅಕ್ರಮವಾಗಿ ಲಾಭ ಮಾಡಿಕೊಳ್ಳಲು ತೈಲ ಕಂಪನಿಗಳು ಪ್ರಯತ್ನಿಸುತ್ತಿವೆ. ಅವುಗಳ ಲೈಸನ್ಸ್ ರದ್ದುಪಡಿಸಲಾಗುತ್ತದೆ ಎಂದು ಇಂಧನ ಮತ್ತು ಪೆಟ್ರೋಲಿಯಂ ಖಾತೆ ಸಚಿವ ಒಮರ್ ಅಯೂಬ್ ಖಾನ್ ಎಚ್ಚರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net