VIDEO | ನಾಡದೇವತೆ ಚಾಮುಂಡೇಶ್ವರಿಗೂ ಪ್ರತಿ ತಿಂಗಳು ಸಿಗಲಿದೆ 2000 ರೂ. 'ಗೃಹಲಕ್ಷ್ಮೀ' ಹಣ!

Untitled design (75)
Published on

ಮೈಸೂರು: ರಾಜ್ಯದ ಪ್ರತಿ ಗೃಹಿಣಿಯರಿಗೆ ಮಾಸಿಕ 2,000 ರೂ. ಹಣವನ್ನು ಗೃಹಲಕ್ಷ್ಮಿ ಯೋಜನೆಯಡಿ ನೀಡುತ್ತಿರುವ ರಾಜ್ಯ ಸರ್ಕಾರ ನಾಡದೇವತೆ ಚಾಮುಂಡೇಶ್ವರಿ ತಾಯಿಗೂ ಕೂಡ ಈ ಹಣ ಲಭಿಸಬೇಕು ಎಂದು ರಾಜ್ಯ ಮಾಧ್ಯಮ ಪ್ರಕೋಷ್ಠದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ಆಗ್ರಹಿಸಿದ್ದಾರೆ.

ಈ ಯೋಜನೆಯಡಿ ಪ್ರತಿ ತಿಂಗಳು ದೇವಿಗೆ 2,000 ರೂ.ಗಳನ್ನು ನೀಡುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದಿರುವುದಾಗಿ ಕಾಂಗ್ರೆಸ್ ಎಂಎಲ್‌ಸಿ ಹಾಗೂ ಪಕ್ಷದ ರಾಜ್ಯ ಮಾಧ್ಯಮ ಪ್ರಕೋಷ್ಠದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ಶುಕ್ರವಾರ ತಿಳಿಸಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಮುಖ್ಯಸ್ಥ ಡಿ.ಕೆ. ಶಿವಕುಮಾರ್ ಅವರು ನಮ್ಮ ಈ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದ್ದು, ಪ್ರತಿ ತಿಂಗಳು ಚಾಮುಂಡೇಶ್ವರಿ ದೇವಸ್ಥಾನದ ಖಾತೆಗೆ ಹಣವನ್ನು ಜಮಾ ಮಾಡುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸೂಚಿಸಿದ್ದಾರೆ ಎಂದು ದಿನೇಶ್ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net