

ಶಿವಮೊಗ್ಗ: ಪ್ರೀತಿ-ವಿಶ್ವಾಸಕ್ಕೆ ಮತ್ತೊಂದು ಹೆಸರೇ ಶ್ರೀಕೃಷ್ಣ. ಎಲ್ಲರೊಂದಿಗೆ ಅತ್ಯಂತ ಪ್ರೀತಿಯಿಂದ ಬೆರೆಯುವ ಗುಣವಿರುವ ಶ್ರೀಕೃಷ್ಣನ ವ್ಯಕ್ತಿತ್ವವನ್ನೇ ಹೊಂದಿರುವ ಗೊಲ್ಲರ ಸಮಾಜ ಸರ್ವಾಂಗೀಣವಾಗಿ ಅಭಿವೃದ್ಧಿ ಹೊಂದಿ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ಆಶಿಸಿದರು.
ಕುವೆಂಪು ರಂಗಮಂದಿರದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಗೊಲ್ಲರ (ಯಾದವ) ಸಂಘ ಆಶ್ರಯದಲ್ಲಿ ಶ್ರೀಕೃಷ್ಣ ಜಯಂತಿ ಉದ್ಘಾಟಿಸಿ ಮಾತನಾಡಿದ ಅವರು, ನಾವೆಲ್ಲರೂ ಶ್ರೀಕೃಷ್ಣ ತೋರಿದ ಸನ್ಮಾರ್ಗದಲ್ಲಿ ನಡೆದು ನೆಮ್ಮದಿಯಿಂದ ಬದುಕು ಸಾಗಿಸಬೇಕಿದೆ ಎಂದರು. ವಿಶೇಷ ಉಪನ್ಯಾಸ ನೀಡಿದ ದಾವಣಗೆರೆ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯೆ ಡಾ. ಜಿ.ಕೆ.ಪ್ರೇಮಾ, ನಾವೆಲ್ಲರೂ ಶ್ರೀ ಕೃಷ್ಣನನ್ನು ಓರ್ವ ಪುರಾಣ ಪುರುಷನನ್ನಾಗಿ ನೋಡಿದ್ದೇವೆ. ಇಡೀ ವಿಶ್ವ ಕೊಂಡಾಡುವ ಕೃಷ್ಣನ ಜನನ, ಬಾಲ ಲೀಲೆ, ತುಂಟಾಟ, ಜೀವನ ಚರಿತ್ರೆ ಸಾಮಾನ್ಯವಾಗಿ ಎಲ್ಲರಿಗೆ ಗೊತ್ತಿದೆ. ಬಾಲ್ಯದ ನಂತರ ಶಂಕಚಕ್ರ ಗಧಾದಾರಿಯಾಗಿ ಹೊರಟು ಹೋಗುತ್ತಾರೆ. ರಾಜಕೀಯ ಧುರೀಣ, ಸಂಧಾನಕಾರ ಆಗುತ್ತಾರೆ ಎಂದರು. ಜಿಲ್ಲಾ ಗೊಲ್ಲರ (ಯಾದವ) ಸಂಘದ ಅಧ್ಯಕ್ಷ ಕೆ.ಅಂಜನಪ್ಪ, ತಾಲೂಕು ಗೊಲ್ಲರ ಸಂಘದ ಅಧ್ಯಕ್ಷ ಎಸ್.ಎಚ್.ಜಗದೀಶ್, ಡಿಸಿ ಕಚೇರಿ ತಹಸೀಲ್ದಾರ್ ಲಿಂಗರಾಜ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಚ್.ಉಮೇಶ್ ಮತ್ತಿತರರಿದ್ದರು.
ಶ್ರೀಕೃಷ್ಣ ಭಗವಂತನ ವಂಶಸ್ಥರಾದ ನೀವು ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯವಾಗಿ ಬಲಿಷ್ಠರಾಗಿ ಬೆಳೆಯಬೇಕು. ಪ್ರೀತಿ ವಿಶ್ವಾಸಕ್ಕೆ ಮತ್ತೊಂದು ಹೆಸರೇ ಗೊಲ್ಲರ ಸಮಾಜ. ಜನರ ಆರ್ಥಿಕ ಅಭಿವೃದ್ಧಿಯಾದರೆ ದೇಶದ ಅಭಿವೃದ್ಧಿಯಾದಂತೆ. ಆದ್ದರಿಂದ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಈ ಯೋಜನೆಗಳ ಸದ್ಬಳಕೆ ಮಾಡಿಕೊಳ್ಳಬೇಕು. ಸಿ.ಎಸ್.ಚಂದ್ರಭೂಪಾಲ್, ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ