ಹಿನಕಲ್ ಫ್ಲೈಓವರ್ ಬಳಿ ಹೊತ್ತಿ ಉರಿದ ಲಾರಿ

Lorry caught fire in Mysore
Published on

ಮೈಸೂರು: ನಗರದ ಹುಣಸೂರು ರಸ್ತೆಯ ಹಿನಕಲ್ ಫ್ಲೈಓವರ್ ಬಳಿಯಲ್ಲಿ ಬುಧವಾರ ಕಾಂಕ್ರಿಟ್ ಮಿಕ್ಸರ್ ಲಾರಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಲಾರಿ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ.

ನಗರದ ವರ್ತುಲ ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಂದರ್ಭ ಲಾರಿಯ ಬ್ಯಾಟರಿಯಲ್ಲಿ ಶಾರ್ಟ್ ಸರ್ಕ್ಯೂಟ್‌ಆಗಿ ಬೆಂಕಿ ಹೊತ್ತಿಕೊಂಡಿತು. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಚಾಲಕ ಲಾರಿಯಿಂದ ಇಳಿದು ಅಪಾಯದಿಂದ ಪಾರಾಗಿದ್ದಾರೆ. ಮಾಹಿತಿ ತಿಳಿದು ಹೆಬ್ಬಾಳಿನ ಅಗ್ನಿ ಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net