VIDEO | ಕಾರು ಹಿಂಬದಿಗೆ ಸಿಲುಕಿ ಜಖಂಗೊಂಡರೂ ನಿಲ್ಲಿಸದೆ 2 ಕಿ.ಮೀ ದೂರ ಎಳೆದೊಯ್ದ ಲಾರಿ ಚಾಲಕ!; ವಿಡಿಯೋ ವೈರಲ್​

Untitled design (67)
Published on

ಉಡುಪಿ: ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಯಾಂಟ್ರೋ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಘಟನೆ ಗಂಭೀರವಾದರೂ ವಾಹನ ನಿಲ್ಲಿಸದೆ 2 ಕಿ.ಮೀ ದೂರ ಲಾರಿ ಚಾಲಕ ಕಾರನ್ನು ಎಳೆದೊಯ್ದ ದೃಶ್ಯ ಸ್ಥಳೀಯರೊಬ್ಬರ ಕ್ಯಾಮರಾದಲ್ಲಿ ಸೆರೆಯಾಗಿದೆ.

ಜುಲೈ 17ರ ಸೋಮವಾರ ಮಧ್ಯಾಹ್ನ ಉಡುಪಿ ಜಿಲ್ಲೆಯ ಪಡುಬಿದ್ರಿ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಟಿಪ್ಪರ್ ಲಾರಿಯ ಚಾಲಕ ಕಾರನ್ನು ಸುಮಾರು 2 ಕಿಲೋಮೀಟರ್ ದೂರದವರೆಗೂ ಎಳೆದುಕೊಂಡು ಹೋಗಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆಯ ದೃಶ್ಯ ಸೋಷಿಯಲ್​ ಮೀಡಿಯಾದಲ್ಲಿ ವ್ಯಾಪಕವಾಗಿ ಹರಿದಾಡಿದೆ.

ಘಟನೆಯ ವಿವರ: ಟಿಪ್ಪರ್‌ನ ಬಂಪರ್‌ಗೆ ಸಿಲುಕಿದ ಸ್ಯಾಂಟ್ರೋ ಕಾರನ್ನು 2 ಕಿಲೋಮೀಟರ್ ದೂರ ಟಿಪ್ಪರ್ ಎಳೆದೊಯ್ದಿರುವ ಘಟನೆ ಪಡುಬಿದ್ರಿಯಲ್ಲಿ ಸೋಮವಾರ ನಡೆದಿದ್ದು, ಕಾರನ್ನು ಎಳೆದೊಯ್ಯವ ಭಯಾನಕ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸಾಗರದಿಂದ ಮಂಗಳೂರು ಕಡೆ ಹೋಗುತ್ತಿದ್ದ ಸ್ಯಾಂಟ್ರೋ ಕಾರು ಹಾಗೂ ಬೆಳ್ಮಣ್ಣಿನಿಂದ ಬೈಕಂಪಾಡಿ ಪ್ರದೇಶಕ್ಕೆ ಹೋಗುತ್ತಿದ್ದ ಟಿಪ್ಪರ್ ನಡುವೆ ಅಪಘಾತವಾಗುತ್ತಿದ್ದಂತೆ, ವಾಹನದ ವೇಗವನ್ನು ಟಿಪ್ಪರ್ ಚಾಲಕ ಹೆಚ್ಚಿಸಿದ್ದು, ಸಾರ್ವಜನಿಕರು ಎಳೆದಾಡಿ ಹೊಡೆಯಬಹುದು ಎಂಬ ಆತಂಕದಲ್ಲಿ ವೇಗವಾಗಿ ಚಾಲಕ ಟಿಪ್ಪರ್ ಓಡಿಸಿದ್ದಾನೆ.

ಟಿಪ್ಪರ್‌ನ ಹಿಂಬದಿಗೆ ಕಾರು ಸಿಲುಕಿರುವ ವಿಚಾರ ಚಾಲಕನಿಗೆ ಗೊತ್ತಿರಲಿಲ್ಲ. ಬಳಿಕ ಟಿಪ್ಪರನ್ನು ಹಿಂಬಾಲಿಸಿಕೊಂಡು ಬಂದು ಬೈದು ಸಾರ್ವಜನಿಕರು ನಿಲ್ಲಿಸಿದ್ದು, ಪಡುಬಿದ್ರಿ ಪೊಲೀಸರು ಟಿಪ್ಪರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಾರಿನಲ್ಲಿದ್ದ ಓರ್ವ ಮಹಿಳೆ ಹಾಗೂ ಇಬ್ಬರು ಪುರುಷರಿಗೆ ಗಾಯವಾಗಿದ್ದು, ಗಾಯಗಳನ್ನು ಆಸ್ಪತ್ರೆಗೆ ಪೊಲೀಸರು ದಾಖಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net