ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರಿ‌ ಅನಾಹುತ!

Untitled design - 2023-08-08T163419.946
Published on

ಬೆಂಗಳೂರು: ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟೈರ್​ ಬ್ಲಾಸ್ಟ್​ ಆದ ಕಾರಣ ಟಿಪ್ಪರ್ ಲಾರಿಯೊಂದು ಬಿಎಂಟಿಸಿ ಬಸ್​ಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಘಟನೆಯ ವಿವರ: ಇಂದು ಮಧ್ಯಾಹ್ನ ಸುಮಾರು 4:10ಕ್ಕೆ ಬೆಂಗಳೂರಿನ ದೇವನಹಳ್ಳಿ ಹೊರವಲಯದ ಹೆದ್ದಾರಿಯಲ್ಲಿ ಟೈರ್​ ಬ್ಲಾಸ್ಟ್​ ಆದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್​ ಲಾರಿಯೊಂದು, ಬಿಎಂಟಿಸಿ ಬಸ್​ಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಹೈವೇಯಲ್ಲಿ ವಾಹನಗಳ ಸಂಚಾರ ವಿರಳವಾಗಿದ್ದ ಕಾರಣ ಭಾರೀ ಅನಾಹುತ ತಪ್ಪಿದೆ. ಘಟನೆಯಲ್ಲಿ ಬಸ್ ಹಾಗೂ ಟಿಪ್ಪರ್ ಚಾಲಕನಿಗೆ ಸಣ್ಣಾಪುಟ್ಟ ಗಾಯಗಳಾಗಿದ್ದು, ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಲ್ಲಿ ಟಿಪ್ಪರ್ ಮುಂಬಾಗ ಮತ್ತು ಬಸ್​ನ ಹಿಂಬಾಗ ಸಂಪೂರ್ಣ ಜಖಂಗೊಂಡಿದ್ದು. ಏರ್ಪೋಟ್ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net