

ತೆಲಂಗಾಣ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಆಟೋರಿಕ್ಷಾ ಮತ್ತು ಮೋಟಾರ್ ಬೈಕ್‌ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ದುರ್ಘಟನೆ ತೆಲಂಗಾಣದ ಮಹಬೂಬ್‌ನಗರ ಜಿಲ್ಲೆಯಲ್ಲಿ ಶುಕ್ರವಾರ (ಜ.5) ತಡರಾತ್ರಿ ಸಂಭವಿಸಿದೆ ಎಂದು ವರದಿಯಾಗಿದೆ.
ಅಪಘಾತ ಸಂಭವಿಸಿದ ಬೆನ್ನಲ್ಲೇ ಸ್ಥಳೀಯರಿಂದ ತೀವ್ರ ಪ್ರತಿಭಟನೆಗಳು ಭುಗಿಲೆದ್ದಿದ್ದು, ಲಾರಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ. ಜನರ ಹಾವಳಿಯಿಂದ ಹೆದ್ದಾರಿಯಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಗಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿ, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಘಟನೆಗೂ ಮೊದಲು ಡಿಸೆಂಬರ್ 25 ರಂದು ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ಮಂಜು ಕವಿದ ವಾತಾವರಣದಿಂದಾಗಿ ರಾಷ್ಟ್ರೀಯ ಹೆದ್ದಾರಿ 186ರಲ್ಲಿ ಸಂಭವಿಸಿದ ಎರಡು ರಸ್ತೆ ಅಪಘಾತಗಳಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಐದು ಜನರು ಸಾವನ್ನಪ್ಪಿದ್ದರು,(ಏಜೆನ್ಸೀಸ್).