

ನಾಪೋಕ್ಲು: ಸಮೀಪದ ಪೇರೂರು ಗ್ರಾಮದಲ್ಲಿ ಬೆಳೆಗಾರರ ತೋಟಗಳಲ್ಲಿ ಕಾಡಾನೆಗಳ ಹಿಂಡು ನಿರಂತರ ದಾಳಿ ನಡೆಸಿ ಅಪಾರ ನಷ್ಟ ಸಂಭವಿಸಿದೆ.
ಬಲ್ಲಮಾವಟ್ಟಿ ಗ್ರಾಮ ಪಂಚಾಯತಿಯ ಪೇರೂರು ಗ್ರಾಮದ ನಿವಾಸಿ ಬೊಟ್ಟೋಳಂಡ ರವಿ ಅವರ ತೋಟಕ್ಕೆ ನುಗ್ಗಿದ ಕಾಡಾನೆಗಳು ಬಾಳೆ, ಕಾಫಿ ತೆಂಗು, ಅಡಕೆ ಹಣ್ಣಿನ ಗಿಡಗಳನ್ನು ತಿಂದು, ತುಳಿದು ಅಪಾರ ನಷ್ಟ ಮಾಡಿವೆ. ಪೇರೂರು ಗ್ರಾಮ ವ್ಯಾಪ್ತಿಯಲ್ಲಿ ಪದೇ ಪದೆ ಕಾಡಾನೆಗಳ ಹಿಂಡು ದಾಳಿ ನಡೆಸುತ್ತಿದ್ದು ರೈತರು ಸಂಕಷ್ಟಕ್ಕೊಳಗಾಗಿದ್ದಾರೆ. ಈಗಾಗಲೇ ಈ ಪ್ರದೇಶದಲ್ಲಿ ಆಗಾಗ್ಗೆ ಕಾಡಾನೆಗಳ ದಾಳಿಯಿಂದ ನಷ್ಟಕ್ಕೊಳಗಾದವರು ಅರಣ್ಯ ಇಲಾಖೆಯನ್ನು ಸಂಪರ್ಕಿಸಿ ಪರಿಹಾರಕ್ಕೆ ಅರ್ಜಿ ಸಲ್ಲಿಸಿದ್ದರೂ ಪರಿಹಾರ ಇದುವರೆಗೆ ಲಭಿಸಿರುವುದಿಲ್ಲ. ಸಂಕಷ್ಟಕ್ಕೊಳಗಾದ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಹಾಗೂ ಕಾಡಾನೆಗಳ ನಿಯಂತ್ರಿಸುವಂತೆ ಬೊಟ್ಟೋಳಂಡ ರವಿ ಮತ್ತು ಗ್ರಾಮಸ್ಥರು ಒತ್ತಾಯಿಸಿದ್ದಾರೆ.