

ಬೆಂಗಳೂರು: ಕ್ರಿಕೆಟಿಗ ಕೆ.ಸಿ.ಕಾರಿಯಪ್ಪ ಪ್ರೇಮ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಕೆ.ಸಿ.ಕಾರಿಯಪ್ಪ ಹಾಗೂ ಆತನ ಮಾಜಿ ಪ್ರೇಯಸಿ ಪರಸ್ಪರ ದೂರು-ಪ್ರತಿದೂರು ದಾಖಲಿಸಿದ್ದಾರೆ.
ತಮ್ಮ ಮಾಜಿ ಪ್ರೇಯಸಿ ನಮ್ಮ ಮನೆಗೆ ಅತಿಕ್ರಮ ಪ್ರವೇಶ ಮಾಡಿ ಅವಾಚ್ಯಶಬ್ಧಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಕೆ.ಸಿ.ಕಾರಿಯಪ್ಪ ಬಾಗಲಗುಂಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮತ್ತೊಂದೆಡೆ ಕೆ.ಸಿ.ಕಾರಿಯಪ್ಪ ಅವರು ಮದುವೆಯಾಗುವುದಾಗಿ ನನ್ನನ್ನು ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಬಳಿಕ ಗರ್ಭಪಾತ ಮಾಡಿಸಿ ಇದೀಗ ಮದುವೆಯಾಗದೆ ವಂಚಿಸಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಮಾಜಿ ಪ್ರೇಯಸಿ ಆರ್.ಟಿ.ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಎರಡೂ ಪ್ರತ್ಯೇಕ ಪ್ರಕರಣಗಳ ಸಂಬಂಧ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.