

LPG: ಪಂಜಾಬ್‌ನ ಹೋಶಿಯಾರ್‌ಪುರ ಜಿಲ್ಲೆಯ ಮಂಡಿಯಾಲ ಗ್ರಾಮದಲ್ಲಿ ಭೀಕರ ಅಪಘಾತ ಸಂಭವಿಸಿದೆ.ಶುಕ್ರವಾರ ತಡರಾತ್ರಿ ಹೋಶಿಯಾರ್‌ಪುರ-ಜಲಂಧರ್ ರಸ್ತೆಯಲ್ಲಿ ಎಲ್‌ಪಿಜಿ ಟ್ಯಾಂಕರ್ ಸ್ಫೋಟಗೊಂಡಿದ್ದು, ಒಬ್ಬರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.
ಟ್ಯಾಂಕರ್‌ನಲ್ಲಿನ ಬೆಂಕಿ ಎಷ್ಟು ಭೀಕರವಾಗಿತ್ತೆಂದರೆ ಅದು ಸುತ್ತಮುತ್ತಲಿನ ಪ್ರದೇಶವನ್ನು ಆವರಿಸಿತು. ಅನೇಕ ಮನೆಗಳು ಮತ್ತು ಅಂಗಡಿಗಳು ಸುಟ್ಟು ಭಸ್ಮವಾಗಿವೆ ಎಂದು ವರದಿ ಉಲ್ಲೇಖಿಸಿದೆ.
ಬೆಂಕಿಯಿಂದಾಗಿ ಒಬ್ಬರು ಸಾವನ್ನಪ್ಪಿದ್ದಾರೆ. ಆದರೆ, ಹೆಚ್ಚಿನ ಸಂಖ್ಯೆಯ ಜನರಿಗೆ ಬೆಂಕಿ ತಗುಲಿದೆ. ಸುಟ್ಟಗಾಯಗಳಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಸಾವಿನ ಸಂಖ್ಯೆ ಏರಿಕೆಯಾಗಬಹುದು.
ಎಲ್‌ಪಿಜಿ ತುಂಬಿದ್ದ ಟ್ಯಾಂಕರ್ ಅಪಘಾತಕ್ಕೀಡಾಗಿ ನಂತರ ಬೆಂಕಿ ಹೊತ್ತಿಕೊಂಡಿದೆ.ಅಪಘಾತದ ನಂತರ, ಟ್ಯಾಂಕರ್‌ನಿಂದ ಅನಿಲ ಸೋರಿಕೆಯಾಗಿ ಬೆಂಕಿ ವೇಗವಾಗಿ ಹರಡಿದೆ. ಘಟನೆಯ ಬಗ್ಗೆ ಮಾಹಿತಿ ಬಂದ ತಕ್ಷಣ, ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ತಲುಪಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.(ಏಜೆನ್ಸೀಸ್)