ಜಾತಿಗಣತಿ ವರದಿಯನ್ನ ಜಾರಿ ಮಾಡಲೇಬೇಕು

ಜಾತಿಗಣತಿ ವರದಿಯನ್ನು ಜಾರಿ ಮಾಡಲೇಬೇಕು ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಒತ್ತಾಯಿಸಿದರು
M-Lakshmana
Published on

ಜಾತಿಗಣತಿ ವರದಿಯನ್ನು ಜಾರಿ ಮಾಡಲೇಬೇಕು ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಒತ್ತಾಯಿಸಿದರು.

ವರದಿಯನ್ನು ಒಕ್ಕಲಿಗರು ಯಾಕೆ ವಿರೋಧ ಮಾಡುತ್ತಿದ್ದಾರೆ ಎಂದು ಗೊತ್ತಿಲ್ಲ. ನಾನು ಕೂಡ ಒಕ್ಕಲಿಗನಾಗಿ ಜಾತಿಗಣತಿ ವರದಿಯನ್ನ ಸ್ವೀಕಾರ ಮಾಡುತ್ತಿದ್ದೇನೆ. ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯಕ್ಕೂ ಜಾತಿಗಣತಿ ವರದಿಯಿಂದ ಲಾಭವಿದೆ. ವರದಿ ಬಗ್ಗೆ ದಯವಿಟ್ಟು ವಿರೋಧ ಮಾಡಬೇಡಿ. ಈಗ ನೀವು ಇದಕ್ಕೆ ಸಹಕಾರ ನೀಡದೆ ಇದ್ದರೆ ಮುಂದೆ ಜಾರಿ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಡಾ.ತಿಮ್ಮಯ್ಯ ಮಾತನಾಡಿ, ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ. ಸಿಎಂ ಸಿದ್ದರಾಮಯ್ಯ ಅವರು ಕೊಟ್ಟ ಜನಪರ ಯೋಜನೆಗಳಿಂದ ಜನ ಕಾಂಗ್ರೆಸ್ ಪರ ಇದ್ದಾರೆ. ಸಂಡೂರು, ಶಿಗ್ಗಾಂವಿ ಮತ್ತು ಚನ್ನಪಟ್ಟಣ ಕ್ಷೇತ್ರ ಮೂರನ್ನೂ ಗೆಲ್ಲುವ ಸಂಪೂರ್ಣ ವಿಶ್ವಾಸ ಇದೆ ಎಂದರು.

ಮುಖಂಡ ಶಿವಣ್ಣ ಮಾತನಾಡಿ, ಯದುವೀರ್ ಅವರು ಸಂಸದರಾಗಿ ಐದು ತಿಂಗಳಾಗಿದೆ ಮೈಸೂರು-ಕೊಡಗು ಕ್ಷೇತ್ರಕ್ಕೆ ನಿಮ್ಮ ಕೊಡುಗೆ ಏನು? ಸಿಎಂ ರಾಜೀನಾಮೆ ಬಗ್ಗೆ ನೀವು ಮಾತನಾಡಿದ್ದೀರಾ. ನಿಮ್ಮ ಪಕ್ಕದಲ್ಲೇ ಕುಳಿತಿದ್ದ ಬಿಜೆಪಿ ನಾಯಕರ ಪಾತ್ರದ ಬಗ್ಗೆ ಮಾತನಾಡಿ. 2020-21ರಲ್ಲಿ ನಡೆದ ಮುಡಾ ಸಭೆಯಲ್ಲಿ ಎಲ್ಲ ಪಕ್ಷದವರು ಭಾಗಿಯಾಗಿದ್ದರು. ಸಿಎಂ ಪತ್ನಿಗೆ ನೀಡಿದ ಸೈಟ್ ಸೇರಿದಂತೆ 240 ವಿಷಯಗಳಿಗೆ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net