ಅರಸೀಕೆರೆ: ತಾಲೂಕು ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಹಾಗೂ ನಗರದ ಸರ್ಕಾರಿ ಜೆ.ಸಿ.ಆಸ್ಪತ್ರೆ ನೌಕರ ಎಂ.ಆರ್.ಕೃಷ್ಣಮೂರ್ತಿ ಅವರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಲಭಿಸಿದೆ. ಏ.23ರಂದು ಬುಧವಾರ ಹಾಸನದ ಕಲಾ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಗಣ್ಯರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.