ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿನಂತೆ ಪಠ್ಯಪುಸ್ತಕ ಪರಿಷ್ಕರಣೆ ಮಾಡುತ್ತೇವೆ: ಸಚಿವ ಮಧು ಬಂಗಾರಪ್ಪ

madhu bangarappa
Published on

ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆ ಮಾಡುವುದರ ಕುರಿತು ಪ್ರಾಥಮಿಕ ಮತ್ತು ಫ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯ 2000 ರೂ. ಅತ್ತೆಗೋ? ಸೊಸೆಗೋ? ಉತ್ತರ ಕೊಟ್ಟ ಲಕ್ಷ್ಮೀ ಹೆಬ್ಬಾಳ್ಕರ್

ಮಕ್ಕಳ ಮನಸ್ಸಿನಲ್ಲಿ ಕಲ್ಮಶ ತುಂಬುವ ಪಠ್ಯವನ್ನು ಉಳಿಸಿಕೊಳ್ಳುವುದಿಲ್ಲ. ಈ ಕುರಿತು ಈಗಾಗಲೇ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರೊಡನೆ ಚರ್ಚಿಸಿ ಕಾನೂನು ಅಭಿಪ್ರಾಯ ಪಡೆದು ಕ್ರಮ ಕೈಗೊಳ್ಳುತ್ತೇನೆ ಎಂದು ಸುದ್ದಿಗಾರರಿಗೆ ಹೇಳಿದರು.

ನಾವು ಪ್ರಣಾಳಿಕೆಯಲ್ಲಿ ಈ ಹಿಂದೆ ಏನು ಹೇಳಿದ್ದೇವೋ ಅದರಂತೆಯೇ ಪಠ್ಯಪುಸ್ತಕ ಪರಿಷ್ಕರಣೆ ಮಾಡುತ್ತೇವೆ. ನಾಳೆಯಿಂದ ಶಾಲೆ ಪ್ರಾರಂಭವಾಗಲಿದ್ದು, ಮಕ್ಕಳು ಖುಷಿಯಿಂದ ಶಾಲೆಗೆ ಬರಬೇಕು ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net