ಮಧ್ಯಪ್ರದೇಶ ರಾಜಕೀಯ ಬಿಕ್ಕಟ್ಟು ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿದ ಮಾಜಿ ಸಿಎಂ ಶಿವರಾಜ್​ಸಿಂಗ್​

shivraj sing madya mar 20
Published on

ಭೋಪಾಲ್ : ಮಧ್ಯ ಪ್ರದೇಶದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟು ಸಂಬಂಧ ಮಾಜಿ ಮುಖ್ಯಮಂತ್ರಿ ಶಿವರಾಜ್​ಸಿಂಗ್​ ಚೌಹಾನ್​ ಸೋಮವಾರ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್​ ಷಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಇದಕ್ಕೂ ಮೊದಲು ಚೌಹಾನ್​ ಅವರು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದರು.
ಮಧ್ಯ ಪ್ರದೇಶದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟು ಸಂಬಂಧ ಇಬ್ಬರು ನಾಯಕರೊಂದಿಗೆ ಅವರು ಚರ್ಚಿಸಿದ್ದಾರೆ.

ಸೋಮವಾರ ಮುಖ್ಯಮಂತ್ರಿ ಕಮಲ್​ನಾಥ್​ ಸಂಪುಟದ 16 ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಈ ಚರ್ಚೆ ನಡೆದಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net