ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆ

Published on

ವಿಜಯವಾಣಿ ಸುದ್ದಿಜಾಲ ಮಡಿಕೇರಿ

ಮೇಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಳಿಗೇರಿಯಲ್ಲಿ ಕಾಂಗ್ರೆಸ್ ತೊರೆದು ಹಲವರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ, ಬಿಜೆಪಿ ಜಿಲ್ಲಾಧ್ಯಕ್ಷರ ಸಮ್ಮುಖದಲ್ಲಿ ಪಕ್ಷ ಸೇರಿದ್ದಾರೆ. ದಂಬೆಕೋಡಿ ಮಾಚಯ್ಯ, ದಂಬೆಕೋಡಿ ಮಿಥುನ್, ಬೈಲೆರ ಸಾಬು ಬಾಲಕೃಷ್ಣ, ಬಿ.ಎನ್. ಸಂತೋಷ್ ಕುಮಾರ್, ಪರ್ಲಕೋಟಿ ರಾಘವಯ್ಯ, ಪರ್ಲಕೋಟಿ ಬೆಲ್ಲು ಬಾಲಕೃಷ್ಣ, ಪರ್ಲಕೋಟಿ ಪ್ರೀತಂಕುಮಾರ್ ಸೇರಿದ್ದಂತೆ ೩೦ ಜನ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ತಾಲೂಕು ಪಂಚಾಯಿತಿ ಮಾಜಿ ಸದಸ್ಯೆ ಕುಮುದಾ ರಶ್ಮಿ,
ಮಡಿಕೇರಿ ಗ್ರಾಮಾಂತರ ಮಂಡಲ ಅಧ್ಯಕ್ಷ ಕಾಂಗೀರ ಸತೀಶ್, ಪ್ರಧಾನ ಕಾರ್ಯದರ್ಶಿಗಳಾದ ಕೋಡಿರ ಪ್ರಸನ್ನ, ಡೀನ್ ಬೋಪಣ್ಣ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net