ಜಿಎಸ್‌ಟಿ ವ್ಯಾಪ್ತಿಗೆ ಪೆಟ್ರೋಲ್.. ಕೇಂದ್ರದ ಅಭಿಪ್ರಾಯ ಕೇಳಿದ ಮದ್ರಾಸ್ ಹೈಕೋರ್ಟ್

madras high court
Published on

ಚೆನ್ನೈ: ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವ ಮನವಿಯ ಬಗ್ಗೆ ಏನು ಹೇಳುತ್ತೀರಿ ಎಂದು ಮದ್ರಾಸ್ ಹೈಕೋರ್ಟ್ ಕೇಂದ್ರ ಸರ್ಕಾರವನ್ನು ಕೇಳಿದೆ.

ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವ ಕುರಿತು ಈ ವಿಚಾರದಲ್ಲಿ ಕಾರ್ಯಸಾಧ್ಯತೆಯ ಸಂಪೂರ್ಣ ವಿವರಗಳೊಂದಿಗೆ ಕೌಂಟರ್ ಅಫಿಡವಿಟ್ ಸಲ್ಲಿಸಲು ಆದೇಶಿಸಲಾಗಿದೆ.

ಮುಂದಿನ ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಿದೆ. ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಕೂಡ ಜಿಎಸ್‌ಟಿ ವ್ಯಾಪ್ತಿಗೆ ತಂದು ದೇಶಾದ್ಯಂತ ಅದೇ ಬೆಲೆಗೆ ಮಾರಾಟ ಮಾಡಬೇಕು ಎಂದು ಕೋರಿ ಹಿರಿಯ ವಕೀಲ ಕನಕರಾಜ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಪೀಠ ಈ ಆದೇಶ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net