ಆತ್ಮಹತ್ಯೆಗೆ ಯತ್ನಿಸಿದ್ದ ಮಾಗಡಿ ರೈತ ಸಾವು

IMG-20230506-WA0098~2
Published on

ಮಾಗಡಿ: ಸಾಲ ಬಾಧೆಯಿಂದ ರೈತರೊಬ್ಬರು ಕೀಟನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಚಿಕಿತ್ಸೆ ಲಕಾರಿಯಾಗದೆ ಶನಿವಾರ ಮೃತಪಟ್ಟರು.

ತಾಲೂಕಿನ ಸಂಜೀವಯ್ಯನ ಪಾಳ್ಯದ ರೈತ ನಂಜಪ್ಪ(42) ಮೃತ.

ಹೂ, ತರಕಾರಿ ಬೆಳೆಯಲು ಲಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದು, ಬೆಳೆ ನಷ್ಟದಿಂದ ಮನನೊಂದು ಏ.26ರಂದು ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ತಕ್ಷಣ ಕುಟುಂಬಸ್ಥರು ಮಾಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೇ.6ರಂದು

ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೃತ ರೈತ ನಂಜಪ್ಪನಿಗೆ ಎರಡು ಎಕರೆ ಜಮೀನಿನಲ್ಲಿ ಹೂವು, ತರಕಾರಿ ಬೆಳೆಯಲು ಕೊಳವೆ ಬಾವಿ ಕೊರೆಸಿ ಲಾಂತರ ರೂ.ಖರ್ಚು ಮಾಡಿ ತೋಟಗಾರಿಕೆ ಬೆಳೆ ಬೆಳೆದಿದ್ದರು. ಸಮಯಕ್ಕೆ ಬೆಳೆಗೆ ಸೂಕ್ತ ಬೆಲೆ ಸಿಗದ ಕಾರಣ ಮಾಡಿಕೊಂಡ ಸಾಲ ತೀರಿಸಲಾಗದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net