

ನವದೆಹಲಿ: ಅಮೆರಿಕದ ಉತ್ತರ ಕ್ಯಾಲಿಫೋರ್ನಿಯಾ ಕರಾವಳಿಯಲ್ಲಿ 7 ತೀವ್ರತೆಯ ಭೂಕಂಪ (Earthquake) ಸಂಭವಿಸಿದೆ ಎಂದು ವರದಿಯಾಗಿದೆ. ಕ್ಯಾಲಿಫೋರ್ನಿಯಾ ಮತ್ತು ಒರೆಗಾನ್ ಕರಾವಳಿ ಪ್ರದೇಶದಲ್ಲಿ ಸುನಾಮಿ (Tsunami) ಎಚ್ಚರಿಕೆಯನ್ನು ನೀಡಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಅಧಿಕಾರಿಗಳು, ಬೆಳಿಗ್ಗೆ ಕಂಪನದ ಅನುಭವ ಆಗಿದ್ದು, ತಕ್ಷಣಕ್ಕೆ ಯಾವುದೇ ಸಾವು-ನೋವಿನ ಬಗ್ಗೆ ವರದಿಯಾಗಿಲ್ಲ. ಈ ಪ್ರದೇಶದ ಜನರಲ್ಲಿ ಭೂಮಿ ನಡುಗಿದ (Earthquake) ಅನುಭವ ಉಂಟಾಗಿದೆ. ಕರಾವಳಿ ನಗರವಾದ ಫೆರ್ನ್‌ಡೇಲ್‌ನಿಂದ ಪಶ್ಚಿಮಕ್ಕೆ 63 ಕಿ.ಮೀ. ದೂರದಲ್ಲಿ ಭೂಕಂಪನವಾಗಿದೆ ಎಂದು ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
https://www.vijayavani.net/hd-devegowda-appeals-to-centre-for-completion-of-hassan-airport-project