

ಕೊಲ್ಕತಾ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ 2025ರ ಮಹಾಕುಂಭ ಮೇಳಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ(Mamata Banerjee) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಆ ಕಾರ್ಯಕ್ರಮವನ್ನು ಸರಿಯಾಗಿ ಯೋಜಿಸಿಲ್ಲ. ಮಹಾ ಕುಂಭವು ಮೃತ್ಯು ಕುಂಭವಾಗಿ ಮಾರ್ಪಟ್ಟಿದೆ ಎಂದು ಅವರು ಹೇಳಿದರು.
ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಗುರಿಯಾಗಿಸಿಕೊಂಡು ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ. ಇತ್ತೀಚಿನ ಕಾಲ್ತುಳಿತ ಘಟನೆಗಳನ್ನು ಉಲ್ಲೇಖಿಸಿ, ಮಹಾಕುಂಭವು ಮೃತ್ಯು ಕುಂಭವಾಗಿದೆ ಎಂದು ಹೇಳಿದ್ದಾರೆ. ವಿಐಪಿಗಳಿಗೆ ವಿಶೇಷ ಸೌಲಭ್ಯಗಳನ್ನು ನೀಡಲಾಗುತ್ತಿದೆ ಆದರೆ ಬಡವರು ಅದರಿಂದ ವಂಚಿತರಾಗುತ್ತಿದ್ದಾರೆ ಎಂದು ಅವರು ಹೇಳಿದರು.
ಇತ್ತಿಚೇಗಷ್ಟೆ ದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ದುರಂತ ಕಾಲ್ತುಳಿತಕ್ಕೆ ರೈಲ್ವೆ ಇಲಾಖೆಯನ್ನು ದೂಷಿಸುತ್ತಾ ಮಹಾಕುಂಭಮೇಳವನ್ನು ಅರ್ಥಹಿನಾ ಎಂದು ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ನೀಡಿದ ಹೇಳಿಕೆಯು ಸಾಮಾಜಿಕ ಜಾಲತಾಣದಲ್ಲಿ ವಿವಾದವನ್ನು ಸೃಷ್ಟಿಸಿತ್ತು.