

ಮುಂಬೈ: ಮಹಾರಾಷ್ಟ್ರದ ಪಲ್ಘಾರ್ ಜಿಲ್ಲೆಯ ವಾಸೈನಲ್ಲಿರುವ ಕೋವಿಡ್ ಕೇಂದ್ರದಲ್ಲಿ ಆಕಸ್ಮಿಕವಾಗಿ ಸಂಭವಿಸಿದ ಅಗ್ನಿ ಅವಘಡದಲ್ಲಿ 13 ಸೋಂಕಿತರು ಸಜೀವ ದಹನವಾಗಿದ್ದಾರೆ.
ವಾಸೈ ವಿರಾರ್ ಮುನ್ಸಿಪಲ್ ಕಾರ್ಪೊರೇಶನ್ನ ಕರೋನಾ ನಿಯಂತ್ರಣ ಕೊಠಡಿಯಲ್ಲಿ ದುರ್ಘಟನೆ ಸಂಭವಿಸಿದೆ.
ವಿರಾರ್ ಪಶ್ಚಿಮದಲ್ಲಿರುವ ವಿಜಯ್ ವಲ್ಲಭ್ ಆಸ್ಪತ್ರೆಯಲ್ಲಿ 15 ರೋಗಿಗಳು ಐಸಿಯುನಲ್ಲಿದ್ದರು. ಈ ವೇಳೆ ಅಗ್ನಿ ಅವಘಡ ಸಂಭವಿಸಿದೆ. ಎಸಿ ಶಾರ್ಟ್ ಸೆರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರಬಹುದೆಂದು ನಂಬಲಾಗಿದೆ.
ಬೆಳಗಿನ ಜಾವ 3 ಗಂಟೆ ಸುಮಾರಿಗೆ ಸ್ನೇಹಿತರೊಬ್ಬರ ಕರೆ ಸ್ವೀಕರಿಸಿದೆ. ಅವರ ಅತ್ತೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ಕೇಳಿ ಅಲ್ಲಿಗೆ ಹೋಗುವಷ್ಟರಲ್ಲಿ ಆಸ್ಪತ್ರೆ ಹೊರಭಾಗದಲ್ಲಿ ಅಗ್ನಿಶಾಮಕ ವಾಹನಗಳು ನಿಂತಿದ್ದವು. ಕಟ್ಟಡದ ಎರಡನೇ ಮಹಡಿಯಲ್ಲಿರುವ ಐಸಿಯು ಕೇರ್ ಹೊಗೆಯಿಂದ ಆವರಿಸಿತ್ತು. ಅಲ್ಲಿ ಇಬ್ಬರು ನರ್ಸ್ಗಳು ಮಾತ್ರ ಇದ್ದರು. ವೈದ್ಯರನ್ನು ನೋಡಲು ಆಗಲಿಲ್ಲ. ಬೆಂಕಿಯನ್ನು ಹೋಗಿಸಲು ಅಗ್ನಿಶಾಮಕ ಸಿಬ್ಬಂದಿಗೆ ಸುಮಾರು ಅರ್ಧ ಗಂಟೆ ಬೇಕಾಯಿತು. ಬಳಿಕ ಅಲ್ಲಿಯೇ 8 ಮೃತದೇಹಗಳು ಪತ್ತೆಯಾಯಿತು ಎಂದು ಪ್ರತ್ಯಕ್ಷದರ್ಶಿ ಅವಿನಾಶ್ ಪಾಟೀಲ್ ಎಂಬುವರು ತಿಳಿಸಿದ್ದಾರೆ.