'ಮಹಾರಾಷ್ಟ್ರ ಸಿಎಂ ಠಾಕ್ರೆ ಮಾಡೋ ಕೆಲಸ ಬಿಟ್ಟು, ಜನರಿಗೆ ಲಾಕ್​ಡೌನ್ ಭೂತ ತೋರಿಸುತ್ತಿದ್ದಾರೆ'

uddhav
Published on

ಮುಂಬೈ: ಕರೊನಾವೈರಸ್ ಪರಿಸ್ಥಿತಿಯನ್ನು ಸರಿಯಾಗಿ ನಿಭಾಯಿಸಲಾಗದೇ, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಜನರಿಗೆ ಲಾಕ್​ಡೌನ್ ಭೂತವನ್ನು ತೋರಿಸಿ ಹೆದರಿಸುತ್ತಿದ್ದಾರೆ ಎಂದು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ನಾರಾಯಣ ರಾಣೆ ಹೇಳಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿರುವ ಅವರು, ಮಹಾರಾಷ್ಟ್ರ ಜನಕ್ಕೆ ಲಾಕ್​ಡೌನ್ ಅವಶ್ಯಕತೆ ಇಲ್ಲ. ಮತ್ತೊಂದು ಲಾಕ್​ಡೌನ್ ಸ್ವೀಕಾರಾರ್ಹವಲ್ಲ. ಸರ್ಕಾರ ಕೋವಿಡ್ ಪರಿಸ್ಥಿತಿಯನ್ನು, ಆರೋಗ್ಯ ಸೌಕರ್ಯಗಳನ್ನು ಹೆಚ್ಚಿಸುವ ಕಡೆಗೆ ಗಮನ ಕೊಡಬೇಕು ಎಂದು ಅವರು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕಿನಿಂದ 54 ಸಾವಿರ ಜನ ಮೃತಪಟ್ಟಿದ್ದಾರೆ. ಆದರೂ ಸದ್ಯದ ಪರಿಸ್ಥಿತಿಯಲ್ಲಿ ಲಾಕ್​ಡೌನ್ ಬೇಕಾಗಿಲ್ಲ. ಮುಖ್ಯಮಂತ್ರಿಯವರಿಗೆ ತಮ್ಮ ಕುಟುಂಬದವರಷ್ಟೇ ಮುಖ್ಯವಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಠಾಕ್ರೆ ಸರ್ಕಾರ ಜನರೊಂದಿಗೆ ಸರಿಯಾಗಿ ನಡೆದುಕೊಳ್ಳಬೇಕು. ಕಳೆದ ಒಂದು ವರ್ಷದಿಂದ ಆರೋಗ್ಯದ ಮೂಲಭೂತ ಸೌಕರ್ಯಗಳ ಹೆಚ್ಚಿಸುವ ಕಡೆಗೆ ಗಮನ ನೀಡಿಲ್ಲ. ಬದಲಿಗೆ ಈಗ ಜನರಿಗೆ ಮತ್ತೊಂದು ಲಾಕ್​ಡೌನ್ ಎಂದು ಹೆದರಿಸುತ್ತಿದ್ದಾರೆ ಎಂದು ನಾರಾಯಣ ರಾಣೆ ಹೇಳಿದ್ದಾರೆ. ಅಲ್ಲದೇ ರಾಣೆ ಅವರು, ಮಹಾರಾಷ್ಟ್ರದಲ್ಲಿ ಅಲ್ಲಲ್ಲಿ ಹೇರಲಾಗುತ್ತಿರುವ ನೈಟಗ ಕರ್ಫ್ಯೂವನ್ನೂ ವಿರೋಧಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net