

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಅನಾರೋಗ್ಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಎರಡು- ಮೂರು ದಿನಗಳ ಕಾಲ ಅವರು ಆಸ್ಪತ್ರೆಯಲ್ಲಿ ಇರಲಿದ್ದು, ಶಸ್ತ್ರಚಿಕಿತ್ಸೆ ಕೂಡ ನಡೆಯಲಿದೆ ಎಂಬುದು ತಿಳಿದುಬಂದಿದೆ.
ಠಾಕ್ರೆ ಅವರು ಈಗಾಗಲೇ ಕತ್ತು ಹಾಗೂ ಬೆನ್ನು ನೋವಿನ ಸಂಬಂಧ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇದೀಗ ಕತ್ತು ಹಾಗೂ ಬೆನ್ನುನೋವು ಅಧಿಕಗೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವೈದ್ಯರು ಅವರಿಗೆ ಸಣ್ಣ ಶಸ್ತ್ರಚಿಕಿತ್ಸೆ ಮಾಡುವ ಸಾಧ್ಯತೆ ಇದ್ದು, ಆ ಕುರಿತ ಖಚಿತ ಮಾಹಿತಿ ಇನ್ನಷ್ಟೇ ಹೊರಬೀಳಬೇಕಿದೆ.