ಬೇರೆಯವರೊಂದಿಗೆ ಮಾತನಾಡಬೇಡವೆಂದ ಪತಿ: ಪತ್ನಿ ಮಾಡಿದ್ದಿಷ್ಟು..

police 3
ಸಾಂದರ್ಭಿಕ ಚಿತ್ರ
Published on

ಥಾಣೆ: ತನ್ನ ಪತಿಯೊಂದಿಗೆ ಜಗಳವಾಡಿ ಮನನೊಂದ 20 ವರ್ಷದ ನವವಿವಾಹಿತ ಮಹಿಳೆಯೊಬ್ಬಳು ಬಹುಮಹಡಿ ವಸತಿ ಕಟ್ಟಡದಿಂದ ಜಿಗಿದು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ.

ಇದನ್ನೂ ಓದಿ: ಶಸ್ತ್ರಚಿಕಿತ್ಸೆ ಬಳಿಕ ಮಹಿಳೆಯ ಹೊಟ್ಟೆಯಲ್ಲಿ ಬಟ್ಟೆ ಬಿಟ್ಟ ವೈದ್ಯ, ತನಿಖೆಗೆ ಆದೇಶ..

ಮಹಿಳೆಯನ್ನು ಪೂಜಾ ಕರಣ್ ಸೋಲಂಕಿ ಎಂದು ಗುರುತಿಸಲಾಗಿದ್ದು, ಶುಕ್ರವಾರ ಡೊಂಬಿವಿಲಿ ಪ್ರದೇಶದಲ್ಲಿ ಸಂಬಂಧಿಕರೊಬ್ಬರನ್ನು ಭೇಟಿ ಮಾಡಲು ಹೋದಾಗ ಪತ್ನಿ ಬೇರೆಯವರೊಂದಿಗೆ ಮಾತನಾಡುವುದನ್ನು ಪತಿ ವಿರೋಧಿಸಿದ ನಂತರ ದಂಪತಿ ನಡುವೆ ಜಗಳ ನಡೆದಿದೆ. ಆ ಬಳಿಕ ಆಕೆ 10 ಅಂತಸ್ತಿನ ಕಟ್ಟಡದ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಆಕೆ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡ ಇತರ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು, ಇದೊಂದು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.(ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net