

ಮುಂಬೈ: ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಬೇಡಿಕೆ ಭಾರೀ ಸ್ವರೂಪ ಪಡೆದುಕೊಂಡಿದೆ. ಈ ಬೇಡಿಕೆಗೆ ಮರಾಠ ಸಮುದಾಯದ ಜನರು ಹಿಂಸಾತ್ಮಕ ಧೋರಣೆ ಅನುಸರಿಸುತ್ತಿದ್ದಾರೆ. ಇದೀಗ ಮಹಾರಾಷ್ಟ್ರ ಸರ್ಕಾರದ ಸಚಿವ ಮತ್ತು ಅಜಿತ್ ಪವಾರ್ ಗುಂಪಿನ ನಾಯಕ ಹಸನ್ ಮುಶ್ರಿಫ್ ಅವರ ಕಾರನ್ನು ಧ್ವಂಸಗೊಳಿಸಲಾಗಿದೆ. ಮುಂಬೈನ ಕೊಲಾಬಾದಲ್ಲಿರುವ ಶಾಸಕರ ನಿವಾಸದ ಬಳಿ ಇಬ್ಬರು ಅಪರಿಚಿತರು ಈ ದಾಳಿ ನಡೆಸಿದ್ದಾರೆ.
ಆರೋಪಿಗಳು ವಶಕ್ಕೆ
ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಮರಾಠಾ ಸಮುದಾಯದ ಜನರು ಮರಾಠಾ ಮೀಸಲಾತಿ ವಿಚಾರವಾಗಿ ಮುಖಂಡರನ್ನೇ ಟಾರ್ಗೆಟ್ ಮಾಡುತ್ತಿರುವುದು ಗಮನಾರ್ಹ. ಹೀಗಾಗಿ ಇದೀಗ ಮುಖ್ಯಮಂತ್ರಿ ಸೇರಿದಂತೆ ಮುಖಂಡರು ಹಾಗೂ ಸಚಿವರ ನಿವಾಸಗಳ ಭದ್ರತೆಯನ್ನು ಹೆಚ್ಚಿಸಲಾಗಿದೆ. ಸದ್ಯ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಮನೋಜ್ಗೆ ಮನವಿ ಮಾಡಿದ ರಾಜ್ ಠಾಕ್ರೆ
ಮಂಗಳವಾರ, ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಅಧ್ಯಕ್ಷ ರಾಜ್ ಠಾಕ್ರೆ, ಮರಾಠ ಸಮುದಾಯಕ್ಕೆ ಮೀಸಲಾತಿಗಾಗಿ ಒತ್ತಾಯಿಸಿ ಕೈಗೊಂಡಿರುವ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸುವಂತೆ ಹೋರಾಟಗಾರ ಮನೋಜ್ ಜಾರಂಜ್ಗೆ ಅವರಿಗೆ ಒತ್ತಾಯಿಸಿದ್ದರು.
ಮನೋಜ್ ಒತ್ತಾಯ
ಮೀಸಲಾತಿ ವಿಚಾರವಾಗಿ ಚರ್ಚಿಸಲು ಮಹಾರಾಷ್ಟ್ರ ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯಬೇಕು ಎಂದೂ ಮನೋಜ್ ಒತ್ತಾಯಿಸಿದ್ದರು.
ಜಾರಂಜ್ಗೆ ರಾಜ್ ಠಾಕ್ರೆಗೆ ಬರೆದ ಪತ್ರದಲ್ಲಿ ಮೀಸಲಾತಿಯ ಲಾಭವನ್ನು ಪಡೆಯಲಾಗದವರು ಅದನ್ನು ಪಡೆಯಬೇಕು ಮತ್ತು ಆರ್ಥಿಕ ಸ್ಥಿತಿಯ ಆಧಾರದ ಮೇಲೆ ಮೀಸಲಾತಿ ನೀಡಬೇಕು ಎಂದು ಹೇಳಿದ್ದಾರೆ. ರಾಜ್ ಠಾಕ್ರೆ ಈ ವಿಷಯದ ಬಗ್ಗೆ ಚರ್ಚಿಸಲು ಸರ್ಕಾರ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯಬೇಕು. ವಿಭಿನ್ನ ಅಭಿಪ್ರಾಯಗಳು ಯಾವುವು ಮತ್ತು ಯಾವ ಕಾನೂನಿನ ಅಡಿಯಲ್ಲಿ ಸರ್ಕಾರವು ಮೀಸಲಾತಿ ನೀಡಲು ಯೋಜಿಸುತ್ತಿದೆ ಎಂಬುದನ್ನು ಎಲ್ಲರಿಗೂ ತಿಳಿಸಿ ಎಂದಿದ್ದಾರೆ.