ಆನ್‌ಲೈನ್ ಗೇಮಿಂಗ್‌ ಜಾಹೀರಾತಿನಲ್ಲಿ ಸಚಿನ್ ತೆಂಡೂಲ್ಕರ್; ಕ್ರಿಕೆಟ್​​ ದಿಗ್ಗಜನ ಮನೆ ಮುಂದೆ ಪ್ರತಿಭಟನೆ

Sachin Tendulkar
Published on

ಮುಂಬೈ: ಕ್ರಿಕೆಟ್​​ ದೇವರು, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರು ಆನ್‌ಲೈನ್ ಗೇಮಿಂಗ್ ಜಾಹೀರಾತಿನಲ್ಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ  ಮುಂಬೈನ ಬಾಂದ್ರಾದಲ್ಲಿರುವ ತೆಂಡೂಲ್ಕರ್ ಅವರ ಮನೆಯ ಎದುರು ಮಹಾರಾಷ್ಟ್ರದ ಸ್ವತಂತ್ರ ಶಾಸಕ ಬಚ್ಚು ಕಾಡು ಮತ್ತು ಅವರ ಬೆಂಬಲಿಗರು ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಚಿನ್ ತೆಂಡೂಲ್ಕರ್ ಅವರು ಆನ್‌ಲೈನ್ ಗೇಮಿಂಗ್ ಆ್ಯಪ್​ಗಳ ಜಾಹೀರಾತಿನಲ್ಲಿ ನಟಿಸಿದ್ದಾರೆ. ಸಚಿನ್ ಅವರ ನಿರ್ಧಾರದಿಂದ ಅಸಮಾಧಾನಗೊಂಡಿರುವ ಶಾಸಕ ಬಚ್ಚು ಕಡು ಮತ್ತು ಅವರ ಬೆಂಬಲಿಗರು, ಸಚಿನ್ ನಟಿಸಿರುವ ಜಾಹೀರಾತು ಯುವಕರ ಮೇಲೆ ಪರಿಣಾಮ ಬೀರುತ್ತಿದೆ ಎಂದು ಆರೋಪಿಸಿ, ಅವರ ಮನೆಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

ತೆಂಡೂಲ್ಕರ್ ಅವರ ಮನೆಯ ಹೊರಗೆ ಪೋಸ್ಟರ್‌ಗಳು, ಬ್ಯಾನರ್‌ಗಳನ್ನು ಹಿಡಿದುಕೊಂಡು ಬೆಂಬಲಿಗರೊಂದಿಗೆ ಬಂದ ಬಚ್ಚು ಕಾಡು, ತೆಂಡೂಲ್ಕರ್  ವಿರುದ್ಧ ಘೋಷಣೆಗಳನ್ನು ಕೂಗಿದರು ಮತ್ತು ಯುವ ಪೀಳಿಗೆಯ ಮೇಲೆ ಪರಿಣಾಮ ಬೀರುವ ಇಂತಹ ಚಟುವಟಿಕೆಗಳನ್ನು  ಜಾಹೀರಾತನ್ನು 15 ದಿನಗಳಲ್ಲಿ ನಿಲ್ಲಿಸುವಂತೆ ಕರೆ ನೀಡಿದ್ದಾರೆ.

ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಶಾಸಕ ಬಚ್ಚು ಕಡು ಮತ್ತು ಅವರ ಬೆಂಬಲಿಗರನ್ನು ವಶಕ್ಕೆ ಪಡೆದು, ಸ್ಥಳದಲ್ಲಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಬಚ್ಚು ಕಡು, ‘ ಸಚಿನ್ ಒಬ್ಬ ಆದರ್ಶ ವ್ಯಕ್ತಿ. ಕೆಲವರಿಗೆ ಅವರು ಕ್ರಿಕೆಟ್ ದೇವರಂತೆ ಬಿಂಬಿತವಾಗಿದ್ದಾರೆ. ಅಲ್ಲದೆ ಸಚಿನ್ ಅವರಿಗೆ ಲಕ್ಷ್ಯಾಂತರ ಫಾಲೋವರ್ಸ್ ಕೂಡ ಇದ್ದಾರೆ. ಹಾಗಾಗಿ ಸಚಿನ್ ಏನಾದರೂ ತಪ್ಪು ಮಾಡಿದ್ದರೆ ಅದು ಯುವ ಪೀಳಿಗೆಯ ಮೇಲೆ ದೊಡ್ಡ ಪರಿಣಾಮ ಬೀರಬಹುದು. ಯಾವುದನ್ನು ಜಾಹೀರಾತು ಮಾಡಬೇಕು, ಯಾವುದನ್ನು ನೀಡಬಾರದು ಎಂಬುದಕ್ಕೆ ಭಾರತ ರತ್ನ ನೀತಿ ಸಂಹಿತೆ ಹೊಂದಿದೆ. ಈಗ ಲಾಯರ್ ಮೂಲಕ ಸಚಿನ್​ ತೆಂಡೂಲ್ಕರ್​ಗೆ ನೋಟಿಸ್ ಕಳುಹಿಸುದ್ದೇನೆ ಎಂದು ಬಚ್ಚು ಕಡು ಆರೋಪಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net