ಮತ ಚಲಾಯಿಸಿ ಗಮನ ಸೆಳೆದ ವಿಶ್ವದ ಅತ್ಯಂತ ಕುಬ್ಜಮಹಿಳೆ!

jyothi
Published on

ಮುಂಬೈ: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ ನಡೆದಿದ್ದು, ಮಹಾರಾಷ್ಟ್ರದ ನಾಗ್ಪುರದಲ್ಲಿ ವಿಶ್ವದ ಅತ್ಯಂತ ಕುಬ್ಜ ಮಹಿಳೆ ಜ್ಯೋತಿ ಆಮ್ಗೆ ಮತ ಚಲಾಯಿಸಿದರು.

30ವರ್ಷದ ಜ್ಯೋತಿ 62.8 ಸೆಂ.ಮೀ ಎತ್ತರ ಇದ್ದಾರೆ. ನಾಗ್ಪುರದ ನಿವಾಸಿಯಾದ ಜ್ಯೋತಿ ಆಮ್ಗೆ ಮತ ತಮ್ಮ ಪೋಷಕರ ಜೊತೆ ಮತಗಟ್ಟೆಗೆ ಆಗಮಿಸಿದರು.

ಈ ವೇಳೆ ಅಲ್ಲಿ ಸೇರಿದ್ದ ಜನರು ಅವರನ್ನು ಸಂತೋಷದಿಂದ ಸ್ವಾಗತಿಸಿದರು. ಅಧಿಕಾರಿಗಳು ಕೂಡ ಜವಾಬ್ದಾರಿ ಮೆರೆದ ಜ್ಯೋತಿ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 2011ರಲ್ಲಿ ಜ್ಯೋತಿ ಅವರನ್ನು ವಿಶ್ವದ ಕುಬ್ಬ ಮಹಿಳೆ ಎಂಬುದಾಗಿ ಗಿನ್ನಿಸ್ ಸಂಸ್ಥೆ ಪ್ರಕಟಿಸಿತು.

ನಾನು ಇಂದು ನನ್ನ ಇಡೀ ಕುಟುಂಬದೊಂದಿಗೆ ಬಂದು ಮತ ಹಾಕಿದ್ದೇನೆ. ಪ್ರತಿಯೊಬ್ಬ ಮತದಾರ ತನ್ನ ಮತವನ್ನು ಚಲಾಯಿಸುವಂತೆ ನಾನು ಮನವಿ ಮಾಡುತ್ತೇನೆ. ಏಕೆಂದರೆ ಅದು ನಮ್ಮ ಕರ್ತವ್ಯವಾಗಿದೆ ಎಂದರು.

ಮೊದಲ ಹಂತದಲ್ಲಿ ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಮಧ್ಯಪ್ರದೇಶ, ಮಹಾರಾಷ್ಟ್ರ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ರಾಜಸ್ಥಾನ, ಸಿಕ್ಕಿಂ, ತಮಿಳುನಾಡು, ತ್ರಿಪುರಾ ಮತ್ತು ಉತ್ತರ ಪ್ರದೇಶದಲ್ಲಿ ಮತದಾನ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net