ಮಹರ್ಷಿ ವಾಲ್ಮೀಕಿ ಎಲ್ಲ ಕಾಲಘಟಕ್ಕೂಆದರ್ಶರು

07 yelandur 01
ಯಳಂದೂರಿನ ತಹಸೀಲ್ದಾರ್ ಕಚೇರಿ ಮುಂಭಾಗ ಮಂಗಳವಾರ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಶಾಸಕ ಎ.ಆರ್.ಕೃಷ್ಣಮೂರ್ತಿ ಉದ್ಘಾಟಿಸಿದರು. ಪಪಂ ಅಧ್ಯಕ್ಷೆ ಲಕ್ಷ್ಮೀ ಮಲ್ಲು, ಉಪಾಧ್ಯಕ್ಷೆ ಶಾಂತಮ್ಮ ಸೇರಿದಂತೆ ಅನೇಕರು ಇದ್ದರು.
Published on

ಯಳಂದೂರು: ರಾಮಾಯಣ ಮಹಾಕಾವ್ಯದ ಮೂಲಕ ಜೀವನದ ಎಲ್ಲ ಪಾಠವನ್ನು ಬೋಧಿಸಿದ ಮಹರ್ಷಿ ವಾಲ್ಮೀಕಿ ಎಲ್ಲ ಕಾಲಘಟಕ್ಕೂ ಆದರ್ಶವಾಗಿದ್ದಾರೆ. ಇವರು ಹಾಕಿಕೊಟ್ಟ ಮಾರ್ಗ ಎಲ್ಲರಿಗೂ ಅದರ್ಶವಾಗಿದೆ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ತಿಳಿಸಿದರು.

ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ಆಡಳಿತ, ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮಂಗಳವಾರ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಈ ಹಿಂದಿನ ಬಿಜೆಪಿ ಸರ್ಕಾರ ವಾಲ್ಮೀಕಿ ಜಯಂತಿಯನ್ನು ಸರ್ಕಾರದ ಮಟ್ಟದಲ್ಲಿ ಆಚರಿಸಲು ಅನುವು ಮಾಡಿಕೊಟ್ಟಿತು. ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ಆವರಣದಲ್ಲಿ ವಾಲ್ಮೀಕಿ ಪುತ್ಥಳಿಯನ್ನು ಸ್ಥಾಪಿಸಿದರು. ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ಇಬ್ಬರಿಗೂ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ಇದರೊಂದಿಗೆ ಚಾಮರಾಜನಗರ ಜಿಲ್ಲಾಡಳಿತದ ಮುಂಭಾಗ ಮಹರ್ಷಿ ವಾಲ್ಮೀಕಿ, ಕನಕದಾಸ ಹಾಗೂ ಭಗೀರಥರ ಪುತ್ಥಳಿ ನಿರ್ಮಾಣಕ್ಕೂ ಈಗಾಗಲೇ ರೂಪುರೇಷೆಗಳು ಸಿದ್ಧವಾಗಿದ್ದು ಶೀಘ್ರದಲ್ಲೇ ಈ ಕಾಮಗಾರಿಯೂ ಕೂಡ ಉದ್ಘಾಟನೆಯಾಗಲಿದೆ ಎಂದರು.

ಮುಖ್ಯ ಭಾಷಣಕಾರ ನಿವೃತ್ತ ಪ್ರಾಂಶುಪಾಲ ಬಂಗಾರನಾಯಕ ಮಾತನಾಡಿ, ವಾಲ್ಮೀಕಿ ಅವರ ಉತ್ತರಾರ್ಧದ ಜೀವನ ನಮಗೆ ಆದರ್ಶವಾಗಬೇಕು. ರಾಮಾಯಣದ ಮೂಲಕ ಕ್ರಿ.ಪೂ. 500 ರಲ್ಲೇ ರಾಮಸೇತುವೆ ಮೂಲಕ ವಿಜ್ಞಾನ, ಪುಷ್ಪಕ ವಿಮಾನದ ಮೂಲಕ ವೈಮಾನಿಕ ತಾಂತ್ರಿಕತೆಯನ್ನು ಹೇಳಿಕೆಕೊಟ್ಟ ವಾಲ್ಮೀಕಿ ಪ್ರಾತಃಸ್ಮರಣೀಯರಾಗಿದ್ದಾರೆ. ಇಂತಹ ಮಹಾನ್ ಕಾವ್ಯ ರಚಿಸಿದ್ದಕ್ಕೆ ದೇವರ ಆಶೀರ್ವಾದ ಶೇ.5 ರಷ್ಟಿರಬಹುದು. ಆದರೆ ಸ್ವಪ್ರಯತ್ನವೇ ಇದಕ್ಕೆ ಮುಖ್ಯ ಕಾರಣವಾಗಿದೆ ಎಂದರು.

ಪಪಂ ಅಧ್ಯಕ್ಷೆ ಲಕ್ಷ್ಮೀ ಮಲ್ಲು, ಉಪಾಧ್ಯಕ್ಷೆ ಶಾಂತಮ್ಮ ನಿಂಗರಾಜು, ಸದಸ್ಯರಾದ ಮಹೇಶ್, ವೈ.ಜಿ.ರಂಗನಾಥ, ಮಹದೇವನಾಯಕ, ಸವಿತಾ ಬಸವರಾಜು, ಮಂಜು, ಪ್ರಭಾವತಿ ರಾಜಶೇಖರ, ಬಿ.ರವಿ, ಸುಶೀಲಾ ಪ್ರಕಾಶ್ ನಾಮನಿರ್ದೇಶಿತ ಸದಸ್ಯರಾದ ಲಿಂಗರಾಜಮೂರ್ತಿ, ಶ್ರೀಕಂಠಸ್ವಾಮಿ, ಮುನಾವರ್‌ಬೇಗ್, ಜಿಪಂ ಮಾಜಿ ಉಪಾದ್ಯಕ್ಷ ಜೆ.ಯೋಗೇಶ್, ತಾಪಂ ಮಾಜಿ ಅಧ್ಯಕ್ಷ ವೆಂಕಟೇಶ್, ಭೀಮಪ್ಪ ತಾಲೂಕು ನಾಯಕ ಮಂಡಳಿ ಅಧ್ಯಕ್ಷ ವೈ.ಎನ್.ಮುರುಳಿಕೃಷ್ಣ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ. ಮಹೇಶ್, ತಹಸೀಲ್ದಾರ್ ಎಸ್.ಎಲ್.ನಯನಾ, ಬಿಇಒ ಎಂ.ಮಾರಯ್ಯ, ಮುಖ್ಯಾಧಿಕಾರಿ ಎಂ.ಪಿ.ಮಹೇಶ್‌ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎ.ಎಂ.ಕೇಶವಮೂರ್ತಿ, ಮೂರ್ತಿ ಸೇರಿದಂತೆ ಅನೇಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net