

ರಾಣೆಬೆನ್ನೂರ: ತಾಲೂಕು ಆಡಳಿತ, ತಾಪಂ, ಸಮಾಜ ಕಲ್ಯಾಣ ಇಲಾಖೆ ಹಾಗೂ ಸ್ಥಳಿಯ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ವತಿಯಿಂದ ಅ. 17ರಂದು ನಗರದ ತಾಪಂ ಸಭಾ ಭವನದಲ್ಲಿ ಶ್ರೀ ಮಹಷಿರ್ ವಾಲ್ಮೀಕಿ ಜಯಂತಿ ಆಚರಿಸಲಾಗುವುದು ಎಂದು ಸಮಾಜದ ತಾಲೂಕು ಅಧ್ಯಕ್ಷ ಚಂದ್ರಣ್ಣ ಬೇಡರ ತಿಳಿಸಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10 ಗಂಟೆಗೆ ನಗರದ ತಳವಾರ ಗಲ್ಲಿಯ ಚೌಡೇಶ್ವರಿ ದೇವಸ್ಥಾನದಿಂದ ಮಹಷಿರ್ ವಾಲ್ಮೀಕಿ ಭಾವಚಿತ್ರದ ಮೆರವಣಿಗೆ ಬಾಜಾ ಭಜಂತ್ರಿ, ಡೊಳ್ಳು ಹಾಗೂ ವಾದ್ಯಮೇಳದ ಮೂಲಕ ಪ್ರಾರಂಭವಾಗಿ ಎಂಜಿ ರಸ್ತೆ ಮೂಲಕ ತಾಪಂ ಆವರಣ ತಲುಪಿಲಿದೆ.
ನಂತರ ತಾಪಂ ಸಭಾಭವನದಲ್ಲಿ ಸಮಾರಂಭ ಜರುಗಲಿದೆ. ತಹಸೀಲ್ದಾರ್ ಆರ್.ಎಚ್. ಭಾಗವಾನ ಸೇರಿ ವಿವಿಧ ಇಲಾಖೆಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಇದರ ಜತೆಗೆ ವಾಲ್ಮೀಕಿ ಸಮಾಜ ಪ್ರತಿಭಾವಂತ ವಿದ್ಯಾಥಿರ್ಗಳಿಗೆ ಹಾಗೂ ನಿವೃತ್ತ ನೌಕರರಿಗೆ, ಕ್ರೀಡಾ ಪ್ರತಿಭೆಗಳಿಗೆ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದರು.
ಪ್ರಮುಖರಾದ ಮಂಜುನಾಥ ಓಲೇಕಾರ, ಶಶಿಧರ ಬಸೇನಾಯ್ಕರ, ರಾಜೇಂದ್ರ ಬಸೇನಾಯ್ಕರ, ಭೀಮಣ್ಣ ಎಡಚಿ, ಕರಬಸಪ್ಪ ಕೂಲೇರ, ಹನುಮಂತ ಮೀನಕಟ್ಟಿ, ರಾಜು ಮಾದಮ್ಮನವರ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.