ಮಹಾತ್ಮಾ ಗಾಂಧಿ ಮರಿ ಮೊಮ್ಮಗ ತುಷಾರ್ ಗಾಂಧಿ ಬಂಧನ

gandhi
Published on

ನವದೆಹಲಿ: ತುಷಾರ್ ಗಾಂಧಿ ಅವರು ಕ್ವಿಟ್ ಇಂಡಿಯಾ ದಿನದ ಸ್ಮರಣಾರ್ಥವಾಗಿ ಕ್ರಾಂತಿ ಮೈದಾನಕ್ಕೆ ತೆರಳುತ್ತಿದ್ದಾಗ ಮುಂಬೈನ  ಸಾಂತಾಕ್ರೂಜ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ.

ತುಷಾರ್ ಗಾಂಧಿ ಅವರು ಟ್ವಿಟರ್​​ನಲ್ಲಿ,​​”ಸ್ವತಂತ್ರ ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ, ನಾನು ಆಗಸ್ಟ್ 9ರಂದು ನಡೆದ ಕ್ವಿಟ್ ಇಂಡಿಯಾ ದಿನದ ನೆನಪಿಗಾಗಿ ಕ್ರಾಂತಿ ಮೈದಾನ ಮನೆಯಿಂದ ಹೊರಟಾಗ ಸಾಂತಾಕ್ರೂಜ್ ಪೊಲೀಸ್ ಬಂಧಿಸಿದ್ದಾರೆ. ಈ ದಿನದಂದೇ ನನ್ನನ್ನೂ ಬಂಧಿಸಿರುವುದು ನನಗೆ ಹೆಮ್ಮೆ ಇದೆ" ಎಂದು ಟ್ವೀಟ್​​ ಮಾಡಿದ್ದಾರೆ.

"ಪೊಲೀಸ್ ಠಾಣೆಯಿಂದ ಹೊರಹೋಗಲು ನನಗೆ ಅನುಮತಿ ದೊರೆತ ತಕ್ಷಣ ನಾನು ಆಗಸ್ಟ್ ಕ್ರಾಂತಿ ಮೈದಾನಕ್ಕೆ ಹೋಗುತ್ತೇನೆ. ಖಂಡಿತವಾಗಿಯೂ ಕ್ರಾಂತಿ ದಿನವನ್ನು ಸ್ಮರಿಸುತ್ತೇನೆ" ಎಂದು ಗಾಂಧಿ ಟ್ವೀಟ್ ಮಾಡಿದ್ದಾರೆ.

ಇಂದು ಕ್ವಿಟ್ ಇಂಡಿಯಾ ದಿನದ 81 ನೇ ವಾರ್ಷಿಕೋತ್ಸವವನ್ನು ಗುರುತಿಸಲಾಗಿದೆ. ಕ್ವಿಟ್ ಇಂಡಿಯಾ ಚಳುವಳಿಯು 1942 , ಆಗಸ್ಟ್ 9ರಂದು ನಡೆದ ನಾಗರಿಕ ದಂಗೆಯಾಗಿದೆ. ಮಹಾತ್ಮ ಗಾಂಧಿಯವರ ನೇತೃತ್ವದಲ್ಲಿ ನಡೆದ ಆಂದೋಲನವು ಸ್ವಾತಂತ್ರ್ಯಕ್ಕಾಗಿ ಹೋರಾಟದ ಅಂತಿಮ ಹಂತಗಳಲ್ಲಿ ಒಂದಾಗಿದೆ. ಗಮನಾರ್ಹವಾದ ಈ ದಿನ, ಸಾವಿರಾರು ಭಾರತೀಯರು ಬೀದಿಗಿಳಿದು ಬ್ರಿಟಿಷರ ಆಡಳಿತದ ವಿರುದ್ಧ ಪ್ರತಿಭಟಿಸಿದರು. ಆಂದೋಲನವು ಮಹಾತ್ಮ ಗಾಂಧಿಯವರ “ಮಾಡು ಇಲ್ಲವೇ ಮಡಿ” ಎಂಬ ಕರೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net