

ಬೆಂಗಳೂರು: ಮಹಿಳೆಯರು ಕಾಂಗ್ರೆಸ್‌ನತ್ತ ಒಲವು ತೋರಿ ಸದಸ್ಯತ್ವ ಪಡೆಯುತ್ತಿದ್ದಾರೆ. ಸದಸ್ಯತ್ವ ಅಭಿಯಾನ ನಿರಂತರವಾಗಿ ಮುಂದುವರಿಯಲಿದ್ದು, ದೇಶದಲ್ಲಿ ಈ ವರ್ಷದೊಳಗೆ 10 ಲಕ್ಷ ಸದಸ್ಯತ್ವ ಸಾಧಿಸುವ ಗುರಿ ಹೊಂದಿದ್ದೇವೆ. ಆಮೂಲಕ ಮಹಿಳೆಯರು ರಾಜಕೀಯ ನ್ಯಾಯ ಪಡೆಯುವ ಹೋರಾಟದಲ್ಲಿ ಭಾಗಿಯಾಗುವಂತೆ ಮಾಡುತ್ತಿದ್ದೇವೆ ಎಂದು ಮಹಿಳಾ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಅಲ್ಕಾಲಂಬಾ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆಪ್ಟೆಂಬರ್ ತಿಂಗಳಲ್ಲಿ ಮಹಿಳಾ ಕಾಂಗ್ರೆಸ್ ಸಂಸ್ಥಾಪನಾ ದಿನದಂದು ರಾಷ್ಟ್ರವ್ಯಾಪಿ ಮಹಿಳಾ ಕಾಂಗ್ರೆಸ್ ಸದಸ್ಯತ್ವ ಅಭಿಯಾನ ಆರಂಭಿಸಿದೆವು. ಈ ಅಭಿಯಾನದಲ್ಲಿ ಒಂದೇ ತಿಂಗಳಲ್ಲಿ 2.50 ಲಕ್ಷ ಮಹಿಳೆಯರು ಆನ್ಲೈನ್ ಮೂಲಕ ಸದಸ್ಯತ್ವ ಪಡೆದಿದ್ದಾರೆ. ತೆಲಂಗಾಣದಲ್ಲಿ 50 ಸಾವಿರ ಮಹಿಳೆಯರು ಸದಸ್ಯತ್ವ ಪಡೆದಿದ್ದು, ಕರ್ನಾಟಕದಲ್ಲಿ 30 ಸಾವಿರ ಮಹಿಳೆಯರು ಮಹಿಳಾ ಕಾಂಗ್ರೆಸ್ ಸದಸ್ಯತ್ವ ಪಡೆದಿದ್ದಾರೆ ಎಂದರು.
ಬೂತ್ ಸಮಿತಿ, ಬ್ಲಾಕ್ ಸಮಿತಿ, ಜಿಲ್ಲಾ ಸಮಿತಿ ಹಾಗೂ ರಾಜ್ಯ ಮಟ್ಟದ ಪದಾಧಿಕಾರಿಗಳನ್ನು ನೇಮಕ ಮಾಡಿ ಸಂಘಟನೆ ಮಾಡಲಾಗುವುದು. ಜತೆಗೆ ಮಹಿಳೆಯರಿಗಾಗಿ ಮಹಿಳಾ ನಾಯಕತ್ವ ತರಬೇತಿ ಶಿಬಿರ ನಡೆಸಲಾಗುವುದು. ಮಹಿಳಾ ಮೀಸಲಾತಿ ಕಾನೂನು ಜಾರಿಗೆ ನಮ್ಮ ಹೋರಾಟ ಮುಂದುವರಿಯಲಿದೆ. ಈ ಕಾನೂನು ಜಾರಿಯಾದರೆ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಲಾಗುವುದು ಎಂದು ಹೇಳಿದರು.
ಪ್ರತಿ ಮನೆಯ ಮಹಿಳೆಗೆ ಕೆಲಸ ಹಾಗೂ ಸಂಪಾದನೆ ಸಿಗುವಂತಾಗಬೇಕು. ದೇಶದಲ್ಲಿ ನಾವು ನಡೆಸಿದ ಸಮೀಕ್ಷೆಯಲ್ಲಿ ಗ್ರಾಮೀಣ ಮಹಿಳೆಯರು ತಮ್ಮ ಋತುಚಕ್ರದ ವೇಳೆ ಅಗತ್ಯವಿರುವ ಸ್ಯಾನಿಟರಿ ಪ್ಯಾಡ್ ಖರೀದಿಸುವುದು ಕಷ್ಟವಾಗುತ್ತಿದೆ. ಇದರಿಂದ ಅನೇಕ ಮಹಿಳೆಯರು ಕ್ಯಾನ್ಸರ್ ನಂತಹ ಮಾರಕ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಹೀಗಾಗಿ ಮಹಿಳಾ ಕಾಂಗ್ರೆಸ್ ಸದಸ್ಯರಿಗೆ ಸ್ಯಾನಿಟರ್ ಪ್ಯಾಡ್ ತಯಾರಿ ಮಾಡುವ ಯಂತ್ರವನ್ನು ಸಿಎಸ್‌ಆರ್ ಂಡ್ ಮೂಲಕ ನೀಡಿ ಅವರಿಗೆ ಆರ್ಥಿಕವಾಗಿ ಸಬಲೀಕರಣ ಮಾಡುವ ಕಾರ್ಯಕ್ರಮ ರೂಪಿಸಿದ್ದೇವೆ. ಇದರಿಂದ ಉತ್ಪಾದನೆಯಾಗುವ ಪ್ಯಾಡ್‌ಗಳನ್ನು ಸರ್ಕಾರದ ನೆರವಿನಿಂದ ಉಚಿತವಾಗಿ ಪ್ರತಿ ಹಳ್ಳಿಯಲ್ಲಿ ಮಹಿಳೆಯರಿಗೆ ನೀಡಲಾಗುವುದು ಎಂದು ವಿವರಿಸಿದರು.