

ಲಖನೌ: ಕೆಲಸದಾಕೆ ಮನೆಯನ್ನು ಶುಚಿಗೊಳಿಸುವ ವೇಳೆ ತನ್ನ ಮೂತ್ರದಿಂದ ನೆಲ ಒರೆಸಿರುವ ಘಟನೆ ಉತ್ತರಪ್ರದೇಶದ ಗ್ರೇಟರ್ ನೊಯ್ಡಾದ ಅಜ್ನಾರ ಹೌಸಿಂಗ್ ಸೊಸೈಟಿಯಲ್ಲಿ ನಡೆದಿದೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಪ್ರಕರಣ ಸಂಬಂಧ ಮನೆಯ ಮಾಲೀಕರು ನೀಡಿದ ದೂರಿನ ಮೇರೆಗೆ ಪೊಲೀಸರು ಕೆಲಸದಾಕೆಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.
ಸದ್ಯ ವೈರಲ್ ಆಗಿರುವ ವಿಡಿಯೋದಲ್ಲಿ ಮನೆ ಕೆಲಸದಾಕೆಸಬೀನಾ ಕಟುನ್ ನೆಲ ಒರೆಸುವ ವೇಳೆ ಬಕೆಟ್ನಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿರುವುದನ್ನು ಕಾಣಬಹುದು.
ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಸಬೀನಾ ಮಾಲೀಕರ ಆರೋಪಗಳನ್ನು ನಿರಾಕರಿಸಿದ್ದು ಬಳಿಕ ತಪ್ಪೊಪ್ಪಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದು ಕೃತ್ಯದ ಕುರಿತು ಯಾವುದೇ ಹೇಳಿಕೆಯನ್ನು ನೀಡಿಲ್ಲ ಎಂದು ತಿಳಿಸಿದ್ದಾರೆ.