28ಕ್ಕೆ ಮೈಲಾರಪ್ಪಗೆ ಹಾಲುಮತ ಚೇತನ ಪುರಸ್ಕಾರ: ಡಾ. ಪ್ರಶಾಂತ್

26 smg dr. prashanth
Published on

ಶಿವಮೊಗ್ಗ: ಹಾಲುಮತ ಸಮಾಜದ ಜನಜಾಗೃತಿ ಸಭೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಹಾಲುಮತ ಚೇತನ ಪುರಸ್ಕಾರ ಸಮಾರಂಭವನ್ನು ಆ.28ರಂದು ಬೆಳಗ್ಗೆ 10ಕ್ಕೆ ಸರ್ಕಾರಿ ನೌಕರರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಹಾಲುಮತ ಮಹಾಸಭಾ ರಾಜ್ಯ ಉಪಾಧ್ಯಕ್ಷ ಡಾ. ಪ್ರಶಾಂತ್ ತಿಳಿಸಿದರು.

ಕಾಗಿನೆಲೆ ಶ್ರೀ ಕ್ಷೇತ್ರದ ಜಗದ್ಗುರು ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಮತ್ತು ಹೊಸದುರ್ಗ ಶಾಖಾಮಠ ಶ್ರೀ ಈಶ್ವರನಾನಂದಪುರಿ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸುವರು. ಇದೇ ವೇಳೆ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಪಿ.ಮೈಲಾರಪ್ಪ ಅವರಿಗೆ ಹಾಲುಮತ ಚೇತನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಕಾರ್ಯಕ್ರಮದಲ್ಲಿ ಸಮಾಜದ ಜನಪ್ರತಿನಿಧಿಗಳು, ಅಧಿಕಾರಿಗಳು, ಮಹಾನಗರ ಪಾಲಿಕೆ ಸದಸ್ಯರು ಸೇರಿದಂತೆ ವಿವಿಧ ಮುಖಂಡರು ಪಾಲ್ಗೊಳ್ಳುವರು. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಶೇ.90ಕ್ಕಿಂತ ಅಧಿಕ ಅಂಕ ಪಡೆದ 85ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದರು.

ಹಾಲುಮತ ಚೇತನ ಪ್ರಶಸ್ತಿಯನ್ನು ಈ ಹಿಂದೆ ದಾವಣಗೆರೆಯ ಮಾಜಿ ಶಾಸಕ ಕೆ.ಮಲ್ಲಪ್ಪ ಅವರಿಗೆ ನೀಡಲಾಗಿತ್ತು. ಇದೀಗ ಎರಡನೇ ಪ್ರಶಸ್ತಿಯನ್ನು ಪಿ.ಮೈಲಾರಪ್ಪ ಅವರಿಗೆ ನೀಡಲಾಗುತ್ತಿದೆ ಎಂದು ಹೇಳಿದರು. ಜಿಲ್ಲಾಧ್ಯಕ್ಷ ಸಿ.ದಾನೇಶ್, ಕಾರ್ಯಾಧ್ಯಕ್ಷ ಗಣೇಶ್ ಬಿಳಿಗಿ, ಮುಖಂಡರಾದ ವಿನಯ್, ಷಡಾಕ್ಷರಿ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net