ವಿಪಕ್ಷ ನಾಯಕರ ಆಯ್ಕೆ: ನಾಳೆ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ!

BJp
Published on

ನವದೆಹಲಿ: ಬಿಜೆಪಿಯಿಂದ ವಿರೋಧ ಪಕ್ಷದ ನಾಯಕರ ಆಯ್ಕೆ ಇನ್ನೂ ಆಗದಿರುವುದು ಕುತೂಹಲ ಕೆರಳಿಸಿರುವ ಬೆನ್ನಿಗೇ ನಾಳೆ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆಯಲಿರುವುದು ತಿಳಿದುಬಂದಿದೆ. ಈ ಕುರಿತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ.

ದೆಹಲಿಯಲ್ಲಿ ಇಂದು ಸುದ್ದಿಗಾರರ ಜತೆ ಮಾತನಾಡಿದ ಯಡಿಯೂರಪ್ಪ, ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷ ಸ್ಥಾನ ಎರಡರ ವಿಚಾರವಾಗಿಯೂ ಪ್ರತಿಕ್ರಿಯೆ ನೀಡಿದ್ದಾರೆ. ಅಲ್ಲದೆ ನಾಳೆ ಅಧಿವೇಶನಕ್ಕೂ ಮುನ್ನ ವಿಪಕ್ಷ ನಾಯಕ ಸ್ಥಾನಕ್ಕೆ ಆಯ್ಕೆ ಇಲ್ಲ ಎಂಬ ವಿಚಾರವನ್ನೂ ಬಿಎಸ್​ವೈ ಸ್ಪಷ್ಟಪಡಿಸಿದ್ದಾರೆ.

ನಾಳೆ ಕೇಂದ್ರದಿಂದ ರಾಜ್ಯಕ್ಕೆ ಇಬ್ಬರು ವೀಕ್ಷಕರು ಆಗಮಿಸಲಿದ್ದಾರೆ. ವಿನೋದ್ ತಾವಡೆ ಮತ್ತು ಮನ್​ಸುಖ್​ ಮಾಂಡವೀಯ ವೀಕ್ಷಕರಾಗಿ ರಾಜ್ಯಕ್ಕೆ ಭೇಟಿ ನೀಡಲಿದ್ದು, ರಾಜ್ಯ ಬಿಜೆಪಿ ಶಾಸಕರಿಂದ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಅವರು ರಾಜ್ಯಾಧ್ಯಕ್ಷ ಹುದ್ದೆ ಕುರಿತು ಕೂಡ ಮಾಹಿತಿ ಸಂಗ್ರಹಿಸಲಿದ್ದು, ಕೇಂದ್ರದ ನಾಯಕರಿಗೆ ವರದಿ ಒಪ್ಪಿಸಲಿದ್ದಾರೆ. ಆ ಬಳಿಕ ವಿಪಕ್ಷ ನಾಯಕ ಸ್ಥಾನಕ್ಕೆ ನೇಮಕ ನಡೆಯಲಿದೆ ಎಂದು ಬಿಎಸ್​ವೈ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net