Skill Development Scam; ಆಂಧ್ರ ಸಿಎಂ ಚಂದ್ರಬಾಬುಗೆ ಕ್ಲೀನ್​ ಚಿಟ್​ ನೀಡಿದ ED

Chandrababu Naidu
Published on

ನವದೆಹಲಿ: ಈ ಹಿಂದೆ ಆಂಧ್ರಪ್ರದೇಶ ಕೌಶಲ್ಯ ಅಭಿವೃದ್ಧಿ ನಿಗಮದಲ್ಲಿ (Skill Development Scam) ನಡೆದಿದ್ದ ಬಹುಕೋಟಿ ಅಕ್ರಮಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (Enforcement Directorate) ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಗೆ (Chandrababu Naidu) ಕ್ಲೀನ್​ ಚಿಟ್​ ನೀಡಿದೆ.

ಹಿಂದಿನ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ (Jagan Mohan Reddy) ನೇತೃತ್ವದ YSRCP ಸರ್ಕಾರವು ನಡೆಸಿದ ತನಿಖೆಯ ಮೇರೆಗೆ ಕಳೆದ ವರ್ಷ ಚಂದ್ರಬಾಬು ನಾಯ್ಡು (Chandrababu Naidu) ಅವರನ್ನು ಬಂಧಿಸಲಾಗಿತ್ತು. 50ಕ್ಕೂ ಹೆಚ್ಚು ದಿನಗಳ ಕಾಲ ಜೈಲಿನಲ್ಲಿದ್ದ ಚಂದ್ರಬಾಬು ನಾಯ್ಡು ಆ ಬಳಿಕ ಮಧ್ಯಂತರ ಜಾಮೀನಿನ ಮೇಲೆ ಹೊರಗೆ ಬಂದಿದ್ದರು.

ಕೌಶಲ್ಯ ಅಭಿವೃದ್ಧಿ ನಿಗಮದ ಹಣವನ್ನು (Skill Development Scam) ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ನಾಯ್ಡು (Chandrababu Naidu) ಅವರನ್ನು ರಾಜಮಹೇಂದ್ರವರಂ ಜೈಲಿನಲ್ಲಿ (Rajamahendravaram Jail) ಇರಿಸಲಾಗಿತ್ತು. ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಲು ನಾಯ್ಡುಗೆ ಜಾಮೀನಿನ (Bail) ಅಗತ್ಯವಿದೆ ಎಂದು ಅವರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದರಿಂದ ವೈದ್ಯಕೀಯ ಆಧಾರದ ಮೇಲೆ ಚಂದ್ರಬಾಬು ನಾಯ್ಡು ಅಕ್ಟೋಬರ್ 31, 2023ರಂದು ಮಧ್ಯಂತರ ಜಾಮೀನು ಪಡೆದಿದ್ದರು.

ಇದೀಗ ಕೌಶಲ್ಯ ಅಭಿವೃದ್ಧಿ ನಿಗಮದ (Skill Development Scam) ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಚಂದ್ರಬಾಬು ನಾಯ್ಡುಗೆ ಕ್ಲೀನ್​ಚಿಟ್​ ನೀಡಿದ್ದು, ಆಂಧ್ರಪ್ರದೇಶದಲ್ಲಿ ಮತ್ತೊಂದು ಸುತ್ತಿನ ರಾಜಕೀಯ ಸಂಘರ್ಷಕ್ಕೆ ನಾಂದಿ ಹಾಡುವುದು ಪಕ್ಕಾ ಆಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net