ಕಾನೂನನ್ನು ಸದುಪಯೋಗಪಡಿಸಿಕೊಳ್ಳಿ

ಪಾಂಡವಪುರದ ಜೆಎಂಎಫ್‌ಸಿ ನ್ಯಾಯಾಲಯದ ಆವರಣದಲ್ಲಿ ಆಯೋಜಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಎಚ್.ಆರ್.ಕನ್ನಿಕಾ ಹಾಗೂ ನ್ಯಾ.ಬಿ.ಪಾರ್ವತಮ್ಮ ಅವರನ್ನು ಸನ್ಮಾನಿಸಲಾಯಿತು. ನ್ಯಾ.ಆರ್.ಮಹೇಶ್, ಎನ್.ಬಾಬು, ಗಂಗರಾಜು, ಕೆ.ಎಸ್.ಮೋಹನ್‌ಕುಮಾರ್, ಎಸ್.ಜೆ.ಜಯರಾಂ, ಪುಷ್ಪಾ ಇತರರಿದ್ದರು.
ಪಾಂಡವಪುರದ ಜೆಎಂಎಫ್‌ಸಿ ನ್ಯಾಯಾಲಯದ ಆವರಣದಲ್ಲಿ ಆಯೋಜಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಎಚ್.ಆರ್.ಕನ್ನಿಕಾ ಹಾಗೂ ನ್ಯಾ.ಬಿ.ಪಾರ್ವತಮ್ಮ ಅವರನ್ನು ಸನ್ಮಾನಿಸಲಾಯಿತು. ನ್ಯಾ.ಆರ್.ಮಹೇಶ್, ಎನ್.ಬಾಬು, ಗಂಗರಾಜು, ಕೆ.ಎಸ್.ಮೋಹನ್‌ಕುಮಾರ್, ಎಸ್.ಜೆ.ಜಯರಾಂ, ಪುಷ್ಪಾ ಇತರರಿದ್ದರು.
Published on

ಮಹಿಳೆಯರಿಗೆ ಹಿರಿಯ ನ್ಯಾಯಾಧೀಶ ಆರ್.ಮಹೇಶ್ ಕರೆ

ಪಾಂಡವಪುರ: ಮಹಿಳೆಯರ ರಕ್ಷಣೆಗಾಗಿ ದೇಶದಲ್ಲಿ ಹಲವಾರು ಕಾನೂನಗಳಿದ್ದು. ಅದನ್ನು ಯಾವುದೇ ಕಾರಣಕ್ಕೂ ದುರುಪಯೋಗಪಡಿಸಿಕೊಳ್ಳದೆ ಸದುಪಯೋಗ ಮಾಡಿಕೊಳ್ಳಬೇಕು ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಆರ್.ಮಹೇಶ್ ಹೇಳಿದರು.
ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘದಿಂದ ಮಂಗಳವಾರ ಆಯೋಜಿಸಿದ್ದ ಅಂರಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ತೋರಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮಹಿಳಾ ದೌರ್ಜನ್ಯಗಳ ಜತೆಗೆ ಪುರುಷರಿಗೆ ತೊಂದರೆ ನೀಡುವಂತಹ ಪ್ರಕರಣಗಳೇ ಹೆಚ್ಚಾಗಿ ನ್ಯಾಯಾಲಯಕ್ಕೆ ಬರುತ್ತಿವೆ. ಹೀಗಾಗಿ ಇಂತಹ ಪ್ರಕರಣಕ್ಕೆ ಮಹಿಳೆಯರು ಕಡಿವಾಣ ಹಾಕಬೇಕು ಎಂದು ಸಲಹೆ ನೀಡಿದರು.
ಪ್ರಧಾನ ಸಿವಿಲ್ ನ್ಯಾಯಾಧೀಶೆ ಬಿ.ಪಾರ್ವತಮ್ಮ ಮಾತನಾಡಿ, ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರ ಪಾತ್ರ ಅತ್ಯಮೂಲ್ಯವಾಗಿದೆ. ಶಿಕ್ಷಣ, ರಾಜಕೀಯ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ಸಾಧನೆ ಮಾಡಿದ್ದಾರೆ. ಜತೆಗೆ ಕುಟುಂಬದ ನಿರ್ವಹಣೆಯಲ್ಲೂ ಮುಖ್ಯ ಪಾತ್ರ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.
ಕನ್ನಿಕ ಶಿಲ್ಪ ನವೋದಯ ಎಜುಕೇಷನ್ ಟ್ರಸ್ಟ್ ನ ಕಾರ್ಯದರ್ಶಿ ಎಚ್.ಆರ್.ಕನ್ನಿಕಾ ಹಾಗೂ ನ್ಯಾಯಾಧೀಶೆ ಬಿ.ಪಾರ್ವತಮ್ಮ ಅವರನ್ನು ಸನ್ಮಾನಿಸಲಾಯಿತು.
ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಎನ್.ಬಾಬು ಮಾತನಾಡಿದರು. ವಕೀಲರ ಸಂಘದ ಅಧ್ಯಕ್ಷ ಗಂಗರಾಜು ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಕೆ.ಎಸ್.ಮೋಹನ್‌ಕುಮಾರ್, ಉಪಾಧ್ಯಕ್ಷ ಎಸ್.ಜೆ.ಜಯರಾಂ, ಖಜಾಂಚಿ ಪುಷ್ಪಾ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net