ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಎಚ್ಚರ ವಹಿಸಿ

ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಎಚ್ಚರ ವಹಿಸಿ
Published on

ಕೆ.ಆರ್.ನಗರ: ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಪಾಲಕರು ಮತ್ತು ಶಿಕ್ಷಕರು ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ತಾಲೂಕು ನಾಯಕರ ಸಂಘದ ಅಧ್ಯಕ್ಷ ತಿಪ್ಪೂರು ನರಸಿಂಹನಾಯಕ ಹೇಳಿದರು.

ಕೆ.ಆರ್.ನಗರ ತಾಲೂಕಿನ ತಿಪ್ಪೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಶನಿವಾರ ಉಚಿತ ನೋಟ್ ಪುಸ್ತಕ ವಿತರಿಸಿ ಮಾತನಾಡಿದ ಅವರು, ನಮ್ಮೂರ ಶಾಲೆಯಲ್ಲಿ ಉತ್ತಮ ಶಿಕ್ಷಕರಿದ್ದು ಗುಣಮಟ್ಟದ ಶಿಕ್ಷಣ ಮಕ್ಕಳಿಗೆ ಸಿಗುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವಂತಾಗಬೇಕು.

ಎಷ್ಟೇ ಕಷ್ಟ ಇದ್ದರೂ ಎಸ್ಸಿ, ಎಸ್ಟಿ ಸಮುದಾಯವರು ಮಕ್ಕಳಿಗೆ ಶಿಕ್ಷಣ ನೀಡಲು ಹೆಚ್ಚಿನ ಒತ್ತು ನೀಡಬೇಕು ಎಂದರು.
ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕಿ ಕೆ.ಎಸ್.ಸುಜಾತ, ಎಸ್‌ಡಿಎಂಸಿ ಅಧ್ಯಕ್ಷ ಮಹಾದೇವ, ಸದಸ್ಯ ರಾಘವೇಂದ್ರ, ಮಂಜುನಾಥ್, ಕಾಳಸ್ವಾಮಿ, ಶಿಕ್ಷಕರು ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net