ಯುವಕರಿಗೆ ರಕ್ತದಾನ ಅರಿವು ಮೂಡಿಸಿ

23ckm2- lions club
ಲಯನ್ಸ್ ಸೇವಾ ಭವನದಲ್ಲಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರವನ್ನು ಶಾಸಕ ಎಚ್.ಡಿ.ತಮ್ಮಯ್ಯ ಉದ್ಘಾಟಿಸಿದರು. ಡಾ.ಮೋಹನ್‌ಕುಮಾರ್, ಡಾ.ಹರೀಶ್, ಚಿದಾನಂದ್, ಡಾ.ರೋಹಿತ್‌ಕುಮಾರ್ ಇತರರಿದ್ದರು.
Published on

ಚಿಕ್ಕಮಗಳೂರು: ರಕ್ತದಾನದ ಮಹತ್ವದ ಬಗ್ಗೆ ಯುವಕರಲ್ಲಿ ಅರಿವು ಮೂಡಿಸಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
ಲಯನ್ಸ್ ಕ್ಲಬ್, ಲಯನ್ಸ್ ಸೇವಾ ಟ್ರಸ್ಟ್, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಜಿಲ್ಲಾ ಆಸ್ಪತ್ರೆಯಿಂದ ಲಯನ್ ದಿವಂಗತ ಬಿ.ಎನ್.ಮಲ್ಲೇಶ್ ಸ್ಮರಣಾರ್ಥ ನಗರದ ಲಯನ್ಸ್ ಸೇವಾ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ, ಎಲ್ಲಾ ದಾನಗಳಿಗಿಂತ ರಕ್ತದಾನ ಶ್ರೇಷ್ಠವಾಗಿದ್ದು, ತುರ್ತು ಸಂದರ್ಭದಲ್ಲಿ ರಕ್ತದಾನ ಮಾಡಿ ಪ್ರಾಣ ಉಳಿಸಬಹುದು. ಲಯನ್ಸ್ ಕ್ಲಬ್ ಸಂಸ್ಥೆಯಿಂದ ಸುವರ್ಣ ಮಹೋತ್ಸವ ಸಂಭ್ರಮದಲ್ಲಿ ರಕ್ತದಾನ ಶಿಬಿರ ಹಮ್ಮಿಕೊಂಡಿರುವುದು ಸಂತಸದ ಸಂಗತಿ ಎಂದರು.
ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನಿರ್ದೇಶಕ ಡಾ.ಹರೀಶ್ ಮಾತನಾಡಿ, ಲಯನ್ಸ್ ಕ್ಲಬ್ ಹಮ್ಮಿಕೊಂಡಿರುವ ರಕ್ತದಾನ ಶಿಬಿರದಲ್ಲಿ ವೈದ್ಯಕೀಯ ಕಾಲೇಜಿನ 35 ಹೆಚ್ಚು ವಿದ್ಯಾರ್ಥಿಗಳು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದ್ದಾರೆ. ಇದರಿಂದ ಸಾವಿನಂಚಿನಲ್ಲಿರುವ ಹಲವು ಮಂದಿ ರೆೋಗಿಗಳ ಜೀವ ಉಳಿಯುತ್ತದೆ ಎಂದು ತಿಳಿಸಿದರು.
ಜಿಲ್ಲಾ ಸಾರ್ವಜನಿಕ ಆಸ್ಪತ್ರೆ ಜಿಲ್ಲಾ ಸರ್ಜನ್ ಡಾ.ಮೋಹನ್‌ಕುಮಾರ್ ಮಾತನಾಡಿ, ರಕ್ತದಾನ ಮಾಡುವುದರಿಂದ ರೋಗಿಗಳ ಜೀವ ಉಳಿಸಬಹುದು. ರಕ್ತದಾನದ ಮಹತ್ವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಹೇಳಿದರು.
ಲಯನ್ಸ್ ಕ್ಲಬ್ ಅಧ್ಯಕ್ಷ ಜಿ.ರಮೇಶ್, ಜಿಲ್ಲಾ ರಕ್ತನಿಧಿ ಕೇಂದ್ರದ ಮುಖ್ಯಸ್ಥರಾದ ಡಾ.ಮುರುಳೀಧರ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನೋಡಲ್ ಅಧಿಕಾರಿ ಡಾ.ರೋಹಿತ್‌ಕುಮಾರ್, ಚಿದಾನಂದ್, ಡಾ.ಪ್ರೀತಿ, ಡಾ.ಜೆ.ಪಿ.ಕೃಷ್ಣೇಗೌಡ, ಪ್ರಕಾಶ್, ನಾಗರಾಜ್, ಪುಷ್ಪರಾಜ್, ಪ್ರೊ.ಜಗದೀಶಪ್ಪ, ಕೇಶವಮೂರ್ತಿ, ರತ್ನಾಕರ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net