

ಚಾಮರಾಜನಗರ:ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ(ಮದ್ಯ) ಮುಕ್ತ ಎಂದು CM ಸಿದ್ದರಾಮಯ್ಯ ಘೋಷಿಸಿದರು.
ಇಲ್ಲಿಯವರೆಗೂ ಬೆಟ್ಟದಲ್ಲಿ, ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಾರಾಟ ಮುಕ್ತ ಇತ್ತು. ಇನ್ನು ಮುಂದೆ ಹೊರಗಿನಿಂದ ತರುವುದಕ್ಕೂ ತಡೆ ಹಾಕಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮತ್ತು ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿತು.
ಪ್ರಾಧಿಕಾರದ ಕೆಲಸ ಕಾರ್ಯಗಳು, ಕಾಮಗಾರಿಗಳು ಸೂಕ್ತವಾಗಿ, ವೇಗವಾಗಿ ನಡೆಯಲು ಒಬ್ಬ AEE ಯನ್ನು ಪ್ರಾಧಿಕಾರಕ್ಕೇ ನೇಮಿಸಲು ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಸತ್ಯನಾರಾಯಣ್ಗೆ ಸೂಚಿಸಿದರು. ಹಿಂದಿನ ಸಭೆಯ ನಿರ್ಣಯದಂತೆ ಪ್ರವಾಸಿಗರ ಶೆಲ್ಟರ್ ಮತ್ತು ಶೌಚಾಲಯಗಳ ಕಾಮಗಾರಿ ಪೂರ್ಣಗೊಳ್ಳದ ಬಗ್ಗೆ ಸಿಎಂ ತರಾಟೆಗೆ ತೆಗೆದುಕೊಂಡರು.
ಮಲೈ ಮಹದೇಶ್ವರ ಬೆಟ್ಟದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಆಗುವುದನ್ನು ಸಂಪೂರ್ಣ ತಡೆಯಬೇಕು. ಚಾಳಿ ಬಿದ್ದ ಆರೋಪಿಯೊಬ್ಬ ಗಡಿಪಾರು ಆದರೂ ಅಕ್ರಮ ಮಾರಾಟ ಮಾಡುತ್ತಿರುವುದನ್ನು ಅಧಿಕಾರಿಗಳಿಂದ ತಿಳಿದ ಸಿಎಂ ಅವರನ್ನು ತಕ್ಷಣ ಕಠಿಣ ಕಾನೂನಿನ ಅಡಿ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದರು. ಪ್ರಾಧಿಕಾರದಲ್ಲಿ ಕೆಲಸ ಮಾಡುವ 66 ಕಾರ್ಮಿಕ ಕುಟುಂಬಗಳಿಗೆ ತಲಾ 20 ಲಕ್ಷ ವೆಚ್ಚದಲ್ಲಿ, ಒಟ್ಟು 12-13 ಕೋಟಿ ವೆಚ್ಚದಲ್ಲಿ ಆದಷ್ಟು ಬೇಗ ನೂತನ ಮನೆ ಕಟ್ಟಿ ಕೊಡಲು ಸಭೆ ನಿರ್ಣಯ.
ಮಲೈ ಮಹದೇಶ್ವರ ಬೆಟ್ಟದ ಪ್ರಸಾದ ಲಾಡುಗೆ, ತಿರುಪತಿ ದೇವಸ್ಥಾನದ ಮಾದರಿಯಲ್ಲಿ ನಂದಿನಿ ತುಪ್ಪ ಬಳಸಿ, ಪ್ರಸಾದದ ಗುಣಮಟ್ಟವನ್ನು ಇನ್ನಷ್ಟು ಉನ್ನತೀಕರಿಸುವುದು. ಮದಿನ ದಿನಗಳಲ್ಲಿ 100 ಗ್ರಾಂ ತೂಕದ ಪ್ರಸಾದ ಲಾಡುವನ್ನು ಕೇವಲ 35 ರೂಪಾಯಿಗೆ ವಿತರಿಸುವ ಬಗ್ಗೆ ಸಭೆ ನಿರ್ಣಯಿಸಲಾಯಿತು.