ಮಲೈಕಾ- ಅರ್ಜುನ್‌ ಕಪೂರ್​ ಬ್ರೇಕ್​ ಅಪ್​; 6 ವರ್ಷಗಳಿಂದ ಡೇಟಿಂಗ್​ ಮಾಡುತ್ತಿದ್ದವರು ಬೇರೆಯಾಗೋದು ಬಹುತೇಕ ಖಚಿತ..!

mali arjun
Published on

ಬಾಲಿವುಡ್​ ಲವ್​ ಬರ್ಡ್ಸ್ ಮಲೈಕಾ ಅರೋರಾ ಮತ್ತು ಅರ್ಜುನ್ ಕಪೂರ್ ನಡುವೆ ಭಿನ್ನಾಭಿಪ್ರಾಯಗಳು ಮೂಡಿವೆ ಎಂದು ಈ ಹಿಂದೆ ವರದಿಯಾಗಿತ್ತು. ಫರಾ ಖಾನ್ ಜೊತೆಗೆ ಜಲಕ್ ದಿಖ್ಲಾ ಜಾ ಶೋನಲ್ಲಿ ತೀರ್ಪುಗಾರರಾಗಿ ಕೆಲಸ ಮಾಡುತ್ತಿರುವ ನಟಿ ಮಲೈಕಾ ಅರೋರಾ, ಇತ್ತೀಚಿನ ಸಂಚಿಕೆಯಲ್ಲಿ ಮರುಮದುವೆ ಬಗ್ಗೆ ಸುಳಿವು ನೀಡಿದ್ದರು.

ಆದ್ರೆ ಈ ಹಿಂದೆಯೂ ಮಲೈಕಾ-ಅರ್ಜುನ್ ನಡುವೆ ಬಿರುಕು ವದಂತಿ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದು, ಇಬ್ಬರೂ ಜತೆಯಾಗಿ ಕಾಣಿಸಿಕೊಂಡು ಬ್ರೇಕ್​ ಅಪ್​ ವದಂತಿಗೆ ತೆರೆ ಎಳೆಯುವ ಕೆಲಸವನ್ನ ಮಾಡಿದ್ದರು.

ಮಲೈಕಾ ಅರ್ಜುನ್​ ಕಪೂರ್​ ಜೊತೆ ಡೇಟಿಂಗ್​ನಲ್ಲಿದ್ದರೂ ಮಗನಿಗಾಗಿ ಆಗಾಗ್ಗೆ ಅರ್ಬಾಜ್​ ಖಾನ್​ರನ್ನು ಭೇಟಿಯಾಗುವುದು, ತಬ್ಬಿಕೊಳ್ಳುವುದು ನಡೆದಿದ್ದು, ಇವುಗಳ ವಿಡಿಯೋಗಳೂ ವೈರಲ್​ ಆಗುತ್ತಲೇ ಇರುತ್ತವೆ. ಮಲೈಕಾ ಏನೋ ಅರ್ಜುನ್​ ಕಪೂರ್​ ಜೊತೆ ಹಲವು ವರ್ಷಗಳಿಂದ ಸಂಬಂಧದಲ್ಲಿದ್ದಾರೆ. ಆದರೆ ಅದೇ ಇನ್ನೊಂದೆಡೆ ಅರ್ಬಾಜ್​ ಖಾನ್ ಕೆಲ ತಿಂಗಳ ಹಿಂದೆ ತಮ್ಮ ಅರ್ಧ ವಯಸ್ಸಿನ ಯುವತಿ ಶುರಾ ಜೊತೆ ಮದುವೆಯಾಗಿ ಸಂಸಾರ ನಡೆಸುತ್ತಿದ್ದಾರೆ.

ಈ ಬೆನ್ನಲ್ಲೇ ಇವರಿಬ್ಬರೂ ಬ್ರೇಕಪ್​ ಆಗಿದ್ದಾರೆ ಎಂಬ ಭಾರಿ ಸುದ್ದಿ ಬಿ ಟೌನ್​ನಲ್ಲಿ ಹರಿದಾಡುತ್ತಿದೆ. ಕೆಲ ತಿಂಗಳ ಹಿಂದೆ ಇಂಥದ್ದೇ ಸುದ್ದಿ ಹರಿದಾಡಿತ್ತು. ಇಷ್ಟು ದಿನ ಮಲೈಕಾ ಜೊತೆ ಟ್ರಿಪ್​ಗೆ ಹೋಗುತ್ತಿದ್ದ ಅರ್ಜುನ್​ ಈಗ ಒಂಟಿಯಾಗಿ ತಿರುಗಾಡಲು ಶುರು ಮಾಡಿದ್ದೇ ಈ ಗಾಳಿ ಸುದ್ದಿಗೆ ಕಾರಣವಾಗಿತ್ತು. ಆದರೆ ಅದರ ಬಳಿಕ ಇಬ್ಬರೂ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಳ್ಳುವ ಮೂಲಕ ವದಂತಿಗೆ ಬ್ರೇಕ್‌ ಹಾಕಿದ್ದರು. ಆದರೆ ಈಗ ನಿಜವಾಗಿಯೂ ಇಬ್ಬರೂ ಬ್ರೇಕಪ್‌ ಆಗಿದ್ದಾರೆ ಎನ್ನಲಾಗಿದೆ.

ಈ ಜೋಡಿ ಬೇರೆಯಾಗಲು ನಿರ್ಧರಿಸಿದ್ದಾರೆ. ಮಲೈಕಾ ಮತ್ತು ಅರ್ಜುನ್ ಅವರ ಸಂಬಂಧವು ತುಂಬಾ ವಿಶೇಷವಾಗಿತ್ತು ಮತ್ತು ಇಬ್ಬರೂ ಯಾವಾಗಲೂ ಪರಸ್ಪರರ ಹೃದಯದಲ್ಲಿ ವಿಶೇಷ ಸ್ಥಾನವನ್ನು ಹೊಂದಿರುತ್ತಾರೆ. ಆದರೆ ಗೌರವಯುತವಾಗಿಯೇ ಈಗ ಬೇರೆಯಾಗಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಆದರೆ ಈ ವಿಚಾರವಾಗಿ ಇಬ್ಬರೂ ಮೌನವಾಗಿದ್ದಾರೆ. ಬ್ರೇಕಪ್‌ಗೆ ನಿಜವಾದ ಕಾರಣ ಇದುವರೆಗೆ ತಿಳಿದು ಬರಲಿಲ್ಲ. ಬ್ರೇಕಪ್‌ ಬಳಿಯೂ ಪರಸ್ಪರ ಗೌರವಿಸುವುದನ್ನು ಮುಂದುವರಿಸುತ್ತಾರೆ ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net