ಪರಾವಲಂಬಿ ಜೀವಿಯಿಂದ ಮಲೇರಿಯಾ

rotary
ಶಿವಮೊಗ್ಗ ರೋಟರಿ ಪೂರ್ವ ಕ್ಲಬ್‌ನಿಂದ ಏರ್ಪಡಿಸಿದ್ದ ಅರೋಗ್ಯ ಸಂಬಂಧಿ ಉಪನ್ಯಾಸದಲ್ಲಿ ಡಾ. ಗುಡದಪ್ಪ ಕಸಬಿ, ಜಿ.ವಿಜಯಕುಮ್, ಕಿಶೋರ ಕುಮಾರ್ ಇದ್ದರು.
Published on

ಶಿವಮೊಗ್ಗ:ಎಲ್ಲ ಹಂತಗಳಲ್ಲಿ ಮಲೇರಿಯಾ ನಿವಾರಣೆ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ರಾಜ್ಯ 2025ರೊಳಗೆ ಮಲೇರಿಯಾ ಮುಕ್ತವಾಗುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕಿದೆ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಗುಡದಪ್ಪ ಕಸಬಿ ಹೇಳಿದರು.

ರೋಟರಿ ಸಭಾಂಗಣದಲ್ಲಿ ರೋಟರಿ ಶಿವಮೊಗ್ಗ ಪೂರ್ವದಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಆರೋಗ್ಯ ಸಂಬಂಧಿ ಉಪನ್ಯಾಸ ನೀಡಿದ ಅವರು, ಬರಿಗಣ್ಣಿಗೆ ಕಾಣಿಸದ ಸೂಕ್ಷ್ಮ ಪ್ಲಾಸ್ಮೋಡಿಯಂ ಎಂಬ ಪರಾವಲಂಬಿ ಜೀವಿಯಿಂದ ಮಲೇರಿಯಾ ಬರುತ್ತದೆ. ಈ ರೋಗ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ ಎಂದು ತಿಳಿಸಿದರು.
ವರ್ಷದ ಎಲ್ಲ ಕಾಲದಲ್ಲಿ ರೋಗ ಕಂಡುಬಂದರೂ ಜೂನ್‌ನಿಂದ ಅಕ್ಟೋಬರ್‌ವರೆಗೆ ಹೆಚ್ಚಾಗಿ ಕಂಡುಬರುತ್ತದೆ. ಎಲ್ಲೆಂದರಲ್ಲಿ ನೀರು ನಿಂತು ಸೊಳ್ಳೆಗಳು ಹೆಚ್ಚಾಗಿ ಕೀಟಜನ್ಯ ರೋಗಗಳು ಹರಡುವ ಸಂಭವ ಇರುತ್ತದೆ. ಸಾಂಕ್ರಾಮಿಕ ರೋಗಗಳ ಹರಡುವಿಕೆ, ನಿಯಂತ್ರಣ, ಚಿಕಿತ್ಸೆ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಯೊಂದಿಗೆ ಸಾರ್ವಜನಿಕರ ಸಹಕಾರದ ಬಗ್ಗೆ ತಿಳಿವಳಿಕೆ ನೀಡುವುದು ಅತಿಮುಖ್ಯ ಎಂದರು.
ರೋಟರಿ ಶಿವಮೊಗ್ಗ ಪೂರ್ವದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡಿ, ಸಾರ್ವಜನಿಕರು ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಆರೋಗ್ಯ ಇಲಾಖೆಯ ಸೂಚನೆಗಳನ್ನು ಅನುಸರಿಸಬೇಕು. ಆರೋಗ್ಯ ಕಾಳಜಿ ವಹಿಸಬೇಕು ಎಂದು ತಿಳಿಸಿದರು.
ರೋಟರಿ ಶಿವಮೊಗ್ಗ ಪೂರ್ವದ ಕಾರ್ಯದರ್ಶಿ ಕಿಶೋರಕುಮಾರ್ ಮುಂತಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net