ಭಾರತಕ್ಕೆ ಧನ್ಯವಾದ ಹೇಳಿದ ಮಾಲ್ಡೀವ್ಸ್ ಅಧ್ಯಕ್ಷ!

moizu
Published on

ಮಾಲೆ: ಸಾಲ ಮರುಪಾವತಿಗೆ ಅಗತ್ಯ ಕ್ರಮಗಳನ್ನು ತೆಗೆದುಕೊಂಡ ಭಾರತಕ್ಕೆ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು ಧನ್ಯವಾದ ಸಲ್ಲಿಸಿದರು.

ಮಾಲ್ಡೀವ್ಸ್‌ನ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಭಾಷಣ ಮಾಡುವಾಗ ಅವರು ಭಾರತ ಮತ್ತು ಚೀನಾಕ್ಕೆ ಧನ್ಯವಾದ ಅರ್ಪಿಸಿದರು.

ಮಾಲ್ಡೀವ್ಸ್ ನ ಆರ್ಥಿಕ ಸಾರ್ವಭೌಮತ್ವಕ್ಕೆ ಎರಡೂ ದೇಶಗಳು ಕೊಡುಗೆ ನೀಡುತ್ತಿದ್ದು, ದೇಶದ ಸಾಲ ತೀರಿಸಲು ಅನುಕೂಲ ಮಾಡಿಕೊಡುತ್ತಿವೆ. ಅಮೆರಿಕ ಡಾಲರ್ ಕೊರತೆ ಹಿನ್ನೆಲೆಯಲ್ಲಿ ಭಾರತ ಮತ್ತು ಚೀನಾ ದೇಶಗಳೊಂದಿಗೆ ‘ಕರೆನ್ಸಿ ಸ್ವಾಪ್’ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಮಾಲ್ಡೀವ್ಸ್ ಪ್ರಸ್ತುತ ಯುಕೆ ಜೊತೆ ಮುಕ್ತ ವ್ಯಾಪಾರ ಒಪ್ಪಂದ (ಎಫ್‌ಟಿಎ) ಕುರಿತು ಮಾತುಕತೆ ನಡೆಸುತ್ತಿದೆ ಎಂದು ಮುಯಿಜ್ಜು ಹೇಳಿದರು.

ಇತ್ತೀಚೆಗೆ ಭಾರತ ಮತ್ತು ಮಾಲ್ಡೀವ್ಸ್ ನಡುವಿನ ಸಂಬಂಧ ಹದಗೆಟ್ಟಿದ್ದುದು ಗೊತ್ತೇ ಇದೆ. ಅದರ ನಂತರ, ಭಾರತದಿಂದ ಆ ದೇಶಕ್ಕೆ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಕುಸಿಯಿತು. ಇದು ದೇಶದ ಆರ್ಥಿಕತೆಯ ಮೇಲೆ ತೀವ್ರ ಪರಿಣಾಮ ಬೀರಿತು. ಇಂತಹ ಸಂದರ್ಭದಲ್ಲಿ ಮುಯಿಜ್ಜು ಕಡೆಯಿಂದ ಸಕಾರಾತ್ಮಕ ಪ್ರತಿಕ್ರಿಯೆಗಳು ಬರುತ್ತಿರುವುದು ಗಮನಾರ್ಹ. ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮಾರಂಭದಲ್ಲಿ ಅವರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net