ಕಾಂಗ್ರೆಸ್​ ವತಿಯಿಂದ ಪ್ರಧಾನಿ ಅಭ್ಯರ್ಥಿಯಾಗಿ ರಾಹುಲ್ ಗಾಂಧಿ ಅಥವಾ ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಸಾಧ್ಯತೆ: ಶಶಿ ತರೂರ್

Shashi Tharoor
Published on

ತಿರುವನಂತಪುರಂ: 2024ರ ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಗೆದ್ದು ಅಧಿಕಾರಕ್ಕೆ ಬಂದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಥವಾ ವಯನಾಡು ಸಂಸದ ರಾಹುಲ್​ ಗಾಂಧಿ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್​ ಕಾರ್ಯಕಾರಿ ಸಮಿತಿ (CWC) ಸದಸ್ಯ ಶಶಿ ತರೂರ್​ ಹೇಳಿದ್ದಾರೆ.

ಈ ಕುರಿತು ತಿರುವನಂತಪುರದಲ್ಲಿ ಸಂವಾದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆಯಲ್ಲಿ ಅ್ಚ್ರಿಯ ಫಲಿತಾಂಶ ಬರಬಹುದು. ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟವನ್ನು ಮಣಿಸಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರುವ ಸಾಧ್ಯತೆಗಳಿವೆ.

ಒಮ್ಮೆ ಫಲಿತಾಂಶ ಬಂದರೆ ಒಂದು ನಿರ್ದಿಷ್ಟ ಪಕ್ಷದ ಪರವಾಗಿ ಬರುವುದಿಲ್ಲ. ಕೇಂದ್ರದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಆಗ ನಾವು ಒಮ್ಮತದಿಂದ ಒಬ್ಬ ನಾಯಕನನ್ನು ಆಯ್ಕೆ ಮಾಡಬೇಕಾಗಿದೆ. ಒಂದು ವೇಳೆ ಕಾಂಗ್ರೆಸ್​ ಪಕ್ಷಕ್ಕೆ ಪ್ರಧಾನಿ ಆಯ್ಕೆ ಮಾಡುವ ಅವಕಾಶ ಒದಗಿ ಬಂದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಥವಾ ರಾಹುಲ್​ ಗಾಂಧಿ ಅವರನ್ನು ಆಯ್ಕೆ ಮಾಡುವ ಸಾಧ್ಯತೆಗಳಿವೆ.

ಪ್ರಧಾನಿಯಾದವರು ಎಲ್ಲರನ್ನೂ ಸಮಾನವಾಗಿ ಕಾಣುವುದು ಮುಖ್ಯ ಮತ್ತು ಆ ಸ್ಥಾನಕ್ಕೆ ಆಯ್ಕೆಯಾಗುವ ಅಭ್ಯರ್ಥಿಯು ತಮ್ಮ ಜವಾಬ್ದಾರಿಯಿಂದ ಸಮರ್ಥವಾಗಿ ನಿಭಾಯಿಸುವ ಸಾಮರ್ಥ್ಯ ಹೊಂದಿದ್ದಾರೆ ಎಂದು ತಿರುವನಂತಪುರ ಕ್ಷೇತ್ರದ ಕಾಂಗ್ರೆಸ್​ ಸಂಸದ ಶಶಿ ತರೂರ್​ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net